ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ನೇಹಾ ಹೊಳ್ಳ ಆಯ್ಕೆ

ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ, ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿ ಸಿ ಆರ್ ಟಿ) ನಡೆಸಿದ 2020-2021, ಭಾರತದ ಯುವ ಪ್ರತಿಭಾ ಶೋಧದಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ, ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ಮಣೂರು ಗ್ರಾಮದ ನೇಹಾ ಹೊಳ್ಳ ಆಯ್ಕೆಯಾಗಿದ್ದಾರೆ.

ಇವರು ಮಣೂರು ಡಾ ಎಂ ವಿ ಹೊಳ್ಳ , ಶಾರದಾ ಹೊಳ್ಳ ಇವರ ಪುತ್ರಿ. ಇವರು ಕಳೆದ 9 ವರ್ಷಗಳಿಂದ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಇವರ ಬಳಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ 2023 ಮಾರ್ಚ್ ನಲ್ಲಿ , ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿಭಾಗದ ಸೀನಿಯರ್ ಪರೀಕ್ಷೆಯನ್ನು ಉನ್ನತ ಶ್ರೇಣಿಯಲ್ಲಿ ಮುಗಿಸಿರುತ್ತಾರೆ.

Leave a Reply

Your email address will not be published. Required fields are marked *