ಕೋಟ: ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ವೀರರ ತ್ಯಾಗ ಬಲಿದಾನ ಅವಿಸ್ಮರಣೀಯ ಎಂದು ಸಾಸ್ತಾನದ ಶ್ರೀ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ ಹೇಳಿದರು.

ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಸ್ವಗೃಹದಲ್ಲಿ ಧ್ವಜಾರೋಹಣಗೈದು ಮಾತನಾಡಿ ದೇಶದ ಅಖಂಡತೆಗಾಗಿ ಅದೆಷ್ಟೊ ಜನ ಜೀವ ಕಳೆದುಕೊಂಡು ಇಂದು ನಾವುಗಳು ನಿರ್ಗಳವಾಗಿ ಜೀವಿಸುವಂತೆ ಮಾಡಿದ್ದಾರೆ. ದೇಶದ ಹಿತದೃಷ್ಠಿಯನ್ನು ನಾವೆಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸುವಾ ಎಂದು ಆಶಯ ವ್ಯಕ್ತಪಡಿಸಿದರು.
ಅಧ್ಯಕ್ಷತೆಯನ್ನು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ವಿಠ್ಠಲ್ ಪೂಜಾರಿ ಐರೋಡಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಾಂಡೇಶ್ವರ ಗ್ರಾಮಪಂಚಾಯತ್ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಲೀಲಾವತಿ ಗಂಗಾಧರ್, ಬಿಜೆಪಿ ಮುಖಂಡದಾದ ಶಂಕರ್ ಕುಲಾಲ್, ಸುರೇಶ್ ಪೂಜಾರಿ, ಬಿಲ್ಲವ ಯುವ ವೇದಿಕೆ ಅಧ್ಯಕ್ಷ ರವಿ ಕಿರಣ್ ಪೂಜಾರಿ, ಸಂಜೀವ ಪೂಜಾರಿ, ಗ್ರಾಮಸ್ಥರು ಉಪಸ್ಥಿತರಿದ್ದರು.
ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಸ್ವಗೃಹದಲ್ಲಿ ಧ್ವಜಾರೋಹಣವನ್ನು ಸಾಸ್ತಾನದ ಶ್ರೀ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ ನೆರವೆರಿಸಿದರು.











Leave a Reply