ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ. ವಿದ್ಯಾಭೂಷಣ್ ಅವರಿಗೆ
ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೆಂಟು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ.

ಈಗಾಗಲೇ ವಿವಿಧ ಕ್ಷೇತ್ರದ ಸಾಧಕರಾದ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಡಾ. ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ , ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್ ಅವರಿಗೆ ಪ್ರದಾನ ಮಾಡಲಾಗಿದೆ.

ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2023ರ ಸಾಲಿನಲ್ಲಿ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಅವರನ್ನು ಆಯ್ಕೆ ಮಾಡಲಾಗಿದೆ. ಹಲವು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ಅಮೂಲ್ಯ ಸೇವೆಯನ್ನು ಹಾಗೂ ಅವರ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಈ ವರ್ಷ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್, ಆಯ್ಕೆ ಸಮಿತಿ ಸದಸ್ಯ ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪಿ.ಡಿ.ಓ ರವೀಂದ್ರ ರಾವ್ , ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *