ಕೋಟ: ಕರ್ನಾಟಕ ಸರಕಾರ ಜಲಾನಯನ ಅಭಿವೃದ್ಧಿ ಇಲಾಖೆ ಮೀನುಗಾರಿಕಾ ಇಲಾಖೆ ಹಾಗೂ ಸ್ಕೊಡ್ವೆಸ್ ಸಂಸ್ಥೆ ಶಿರಸಿ ಇದರ ಸಹಯೋಗದೊಂದಿಗೆ ರಚಿಸಲ್ಪಟ್ಟ ಸಾಸ್ತಾನದ ಉಡುಪಿ ಕಿನಾರ ಮೀನುಗಾರರ ರೈತ ಉತ್ಪಾದಕರ ಕಂಪನಿಯ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಸೆ.30ರಂದು ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ ನಲ್ಲಿ ಜರುಗಿತು.
ಕಂಪನಿಯ ಅಧ್ಯಕ್ಷ ಲೋಹಿತ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಾಗೂ ಸ್ಕೊಡ್ವೇಸ್ ಸಂಸ್ಥೆಯ ಜಿಲ್ಲಾ ಸಂಯೋಜಕ ಗಂಗಾಧರ ನಾಯ್ಕ್ ಉಪಸ್ಥಿತರಿದ್ದರು ಹಾಗೂ ಜಿಲ್ಲಾ ಸಂಯೋಜಕ ಸೂರಾಜ್ ಶೆಟ್ಟಿ ಪಿ.ಎಂ.ಎಫ್.ಎಂ.ಇ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಕಂಪನಿಯ ಸಿಇಓ ಗಾಯತ್ರಿ ವಿಜಯ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕಿ ಮಾಲತಿ ಪ್ರಾರ್ಥನೆಗೈದರು. ಸಂಸ್ಥೆಯ ಸಿಬ್ಬಂದಿ ಭೂಮಿಕಾ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ವಿದೀಕ್ಷ ಪೂಜಾರಿ ಸ್ವಾಗತಿಸಿ ವಂದಿಸಿದರು.
ಸಾಸ್ತಾನದ ಉಡುಪಿ ಕಿನಾರ ಮೀನುಗಾರರ ರೈತ ಉತ್ಪಾದಕರ ಕಂಪನಿಯ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಸೆ.30ರಂದು ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‍ನಲ್ಲಿ ಜರುಗಿತು.











Leave a Reply