ಕೋಟ; ಪುರಾಣ ಪ್ರಸಿದ್ಧ ಕೋಟದ ಶ್ರೀ ಕ್ಷೇತ್ರ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನ ಇಲ್ಲಿ ಇದೇ ಬರುವ ಅ.15ರಿಂದ 24ರವರೆಗೆ ಶರನ್ನವರಾತ್ರಿಯ ಅಂಗವಾಗಿ ಪ್ರತಿದಿನ ಚಂಡಿಕಾ ಸಪ್ತಶತಿ ಪಾರಾಯಣ, ದುರ್ಗಾಹೋಮವು ಸಕಲ ವೈದಿಕ, ಪ್ರತಿದಿನ ಅಪರಾಹ್ನ 12:30ಕ್ಕೆ ಮಹಾಪೂಜೆ ನಂತರ ಅನ್ನಸಂತರ್ಪಣೆ,ಸಂಜೆ ಭಜನೆ ಹಾಗೂ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಶ್ರೀ ದೇಗುಲದ ಅಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ












Leave a Reply