ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟತಟ್ಟು- ಕುಷ್ಠರೋಗದ ಕುರಿತು ಮಾಹಿತಿ ಮತ್ತು ಚರ್ಮರೋಗ ತಪಾಸಣೆ ಚಿಕಿತ್ಸಾ ಶಿಬಿರ

ಕೋಟ: ರೋಟರಿ ಕ್ಲಬ್ ಕೋರ್ಟ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರ ಕೋಟ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕೋಟತಟ್ಟು ಇವರ ಸಂಯುಕ್ತ ಆಶ್ರಯದಲ್ಲಿಆಯುಷ್ಮಾನ್‍ಭವ ಕಾರ್ಯಕ್ರಮದಡಿಯಲ್ಲಿ ಕುಷ್ಠರೋಗದ ಕುರಿತು ಮಾಹಿತಿ ಕಾರ್ಯಗಾರ ಮತ್ತು ಚರ್ಮರೋಗ ತಪಾಸಣೆ ಚಿಕಿತ್ಸಾ ಶಿಬಿರವನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕೋಟತಟ್ಟುವಿನಲ್ಲಿ ನಡೆಸಲಾಯಿತು.

ಈ ಶಿಬಿರವನ್ನು ಸಮುದಾಯ ಆರೋಗ್ಯ ಅಧಿಕಾರಿ ವಾರಿಜಾ ಅವರು ನಡೆಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ದೇವಪ್ಪ ಪಟಗಾರ್ ವಹಿಸಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿ ಹರಿಶ್ಚಂದ್ರ ನಾಯಕ್ ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬೇಬಿ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಕೋರ್ಟ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರ ಕೋಟ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕೋಟತಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಕುಷ್ಠರೋಗದ ಕುರಿತು ಮಾಹಿತಿ ಮತ್ತು ಚರ್ಮರೋಗ ತಪಾಸಣೆ ಚಿಕಿತ್ಸಾ ಶಿಬಿರ ಕಾರ್ಯಕ್ರಮ ಕೋಟತಟ್ಟು ಪರಿಸರದಲ್ಲಿ ಜರಗಿತು.

Leave a Reply

Your email address will not be published. Required fields are marked *