ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ : ವಿದ್ಯಾರ್ಥಿಯ ಜೀವನದಲ್ಲಿ ಸಿಗುವ ಸಣ್ಣಪುಟ್ಟ ಅವಕಾಶಗಳನ್ನು ಬಳಸಿಕೊಂಡು ಬೆಳೆದಾಗ ವ್ಯಕ್ತಿತ್ವ ವಿಕಸನವಾಗುತ್ತದೆ. ಈ ದೆಸೆಯಲ್ಲಿ ವಿದ್ಯಾರ್ಥಿಗಳು ಸಾಗಬೇಕು ಎಂದು ರೇಡಿಯೋ ಕುಂದಾಪುರದ ಕಾರ್ಯನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ನುಡಿದರು.

ಅವರು ವಿವೇಕ ಬಾಲಕಿಯರ ಪ್ರೌಢಶಾಲೆ, ಕೋಟ ಮತ್ತು ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕೋಟ ಇದರ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಇನ್ನೋರ್ವ ಅಭ್ಯಾಗತರಾದ ಶ್ರೀಲತಾ ಅಡಿಗ ತನ್ನ ವಿದ್ಯಾರ್ಥಿ ಜೀವನದಲ್ಲಿ ತಾನು ಬಳಸಿಕೊಂಡ ಅವಕಾಶಗಳ ಬಗ್ಗೆ ಹಂಚಿಕೊಂಡರು. ಸಮಾರಂಭದ ಅಧ್ಯಕ್ಷತೆಯನ್ನು ಕೋಟ ವಿದ್ಯಾ ಸಂಘದ ಅಧ್ಯಕ್ಷರಾದ ಸಿ. ಎ . ಪ್ರಭಾಕರ ಮಯ್ಯರವರು ವಹಿಸಿದ್ದರು ವೇದಿಕೆಯಲ್ಲಿ ಕೋಟ ವಿದ್ಯಾಸಂಘದ  ಕಾರ್ಯದರ್ಶಿ ಎಂ. ರಾಮದೇವ ಐತಾಳ್,  ಹಿಂದಿನ ವಿದ್ಯಾರ್ಥಿ ಸಂಘದ  ಅಧ್ಯಕ್ಷರಾದ ಚೇಮ್ಪೀ ರಮಾನಂದ ಭಟ್, ಪ್ರಾಂಶುಪಾಲರಾದ ಜಗದೀಶ್ ನಾವುಡ, ಹಿರಿಯ ಶಿಕ್ಷಕರಾದ ಪ್ರೇಮಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾರಾದ ವೆಂಕಟೇಶ ಉಡುಪರು ಸ್ವಾಗತಿಸಿದರೆ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾರಾದ ಪ್ರೀತಿ ರೇಖಾ ವಂದಿಸಿದರು. ಹಿರಿಯ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ  ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *