ಕೋಟ: ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮದ ಪಡುಕರೆಯ ಜನರಲ್ ಸ್ಟೋರ್ಸ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಆಹಾರ ಇಲಾಖೆಯವರು ದಾಳಿ ನಡೆಸಿ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಕೋಟದ ಶ್ರೀ ಸಾಯಿರಾಮ್ ಜನರಲ್ ಸ್ಟೋರ್ ನಲ್ಲಿ ಅನ್ನ ಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಉಚಿತವಾಗಿ ನೀಡುವ ಅಕ್ಕಿಯನ್ನು ಕಾನೂನು ಬಾಹಿರವಾಗಿ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಪೊಲೀಸರ ಜೊತೆಗೆ ಪಡಿತರ ಇಲಾಖೆಯವರು ದಾಳಿ ನಡೆಸಿದ್ದಾರೆ.
ಅಂಗಡಿಯಲ್ಲಿ ಸಂಗ್ರಹಿಸಿ ಇಟ್ಟಿದ್ದ 1,503,55 ಕೆಜಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.ನಂತರ ಪ್ರಕರಣವನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಕೋಟ: ಅಕ್ರಮ ಪಡಿತರ ಅಕ್ಕಿ ದಾಸ್ತಾನು, ಆಹಾರ ಇಲಾಖೆಯಿಂದ ದಾಳಿ…!!











Leave a Reply