ಕಿರಣ್ ಪೂಜಾರಿ ಸಾರಥ್ಯದಲ್ಲಿ…..

IPL ಅಕ್ರಮ ಟಿಕೆಟ್‌ ದಂಧೆ; ನಾಲ್ವರ ಸೆರೆ…!!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಆರ್‌ ಸಿಬಿ ನಡುವಿನ ಐಪಿಎಲ್‌ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚರಣ್‌ ರಾಜ್‌, ಹರ್ಷವರ್ಧನ್‌, ವಿನಯ್‌ ಮತ್ತು ವೆಂಕಟಸಾಯಿ ಕಿರಣ್‌ ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 38,400 ರೂ. ಮೌಲ್ಯದ 32 ಐಪಿಎಲ್‌ ಟಿಕೆಟ್‌, 1 ಮೊಬೈಲ್‌, 1 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಸಾಮಾನ್ಯವಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಆರ್‌ಸಿಬಿ ನಡುವಿನ ಪಂದ್ಯಕ್ಕೆ ಭಾರೀ ಬೇಡಿಕೆ ಇರುತ್ತದೆ. ಅದನ್ನೇ ಬಂಡವಾಳ ಮಾಡಿಕೊಂಡ ಆರೋಪಿಗಳು, 1200 ರೂ. ಮೌಲ್ಯದ ಟಿಕೆಟ್‌ಗಳನ್ನು 5-10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿಗಳು, ಖರೀದಿದಾರರ ಸೋಗಿನಲ್ಲಿ ಹೋಗಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ.

ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

Leave a Reply

Your email address will not be published. Required fields are marked *