ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ಬೇಟಿ

ಪರಮಪೂಜ್ಯ ಶ್ರೀ ಕಾಶಿ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತ ಕಾರ್ಯಕ್ರಮ ಕೋಟೇಶ್ವರದ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನ ಕ್ಕೆ ಭೇಟಿ ನೀಡಿ ತದನಂತರ ಶ್ರೀ ಕಾಶಿ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಹ್ಯಾಂಗ್ಯೋ ಸಂಸ್ಥೆಯ ನಿರ್ದೇಶಕರಾದ ಪ್ರದೀಪ ಪೈ ಸಮಾಜ ಸೇವಕರಾದ ರಂಗನಾಥ್ ಭಟ್ ಕೋಟೇಶ್ವರ ಯುವ ಕಾಂಗ್ರೆಸ್ ಮುಖಂಡರಾದ ಕೋಡಿ ಸುನಿಲ್ ಪೂಜಾರಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಮತ್ತು ಚಾತುರ್ಮಾಸ ಸಮಿತಿಯ ಅಧ್ಯಕ್ಷರು ಸರ್ವ ಸದಸ್ಯರು ಸಮಾಜ ಬಾಂಧವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *