ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟಪಂಚವರ್ಣ ಸಂಘಟನೆಯಿಂದ 285ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಕೋಟತಟ್ಟು ಪಡುಕರೆ ಬೀಚ್ ಕ್ಲಿನಿಂಗ್

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ , ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮಪಂಚಾಯತ್ ಸಂಯೋಜನೆಯೊoದಿಗೆ 285 ನೇ ಭಾನುವಾರದ ಪರಿಸರಸ್ನೇಹಿ ಬೀಚ್ ಕ್ಲಿನಿಂಗ್ ಕಾರ್ಯಕ್ರನ ಕೋಟತಟ್ಟು ಪಡುಕರೆ ಶಿರಸಿಮಾರಿಯಮ್ಮ ಕಡುವಿನ ಬಾಗಿಲು ಇಲ್ಲಿ ಜರಗಿತು.

ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮಪಂಚಾಯತ್ ಮಾಜಿ ಸದಸ್ಯೆ ಸುಜಾತ ಉದಯ್ ತಿಂಗಳಾಯ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ಶ್ಯಾಮಲ ಸಿ ಪುತ್ರನ್ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ಸಲಹಾ ಸಮಿತಿಯ ರವೀಂದ್ರ ಕೋಟ ಸಂಯೋಜಿಸಿದರು.

ಕೋಟಪoಚವರ್ಣ ಸಂಘಟನೆಯಿoದ 285ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಕೋಟತಟ್ಟು ಪಡುಕರೆ ಬೀಚ್ ಕ್ಲಿನಿಂಗ್ ಭಾನುವಾರ ಜರಗಿತು. ಕೋಟತಟ್ಟು ಗ್ರಾಮಪಂಚಾಯತ್ ಮಾಜಿ ಸದಸ್ಯೆ ಸುಜಾತ ಉದಯ್ ತಿಂಗಳಾಯ, ಪoಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್ ಇದ್ದರು.

Leave a Reply

Your email address will not be published. Required fields are marked *