ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಜನವರಿ 8 ರಿಂದ ಆರ್.‌ಡಿ.ಪಿ.ಆರ್  ಇಲಾಖೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ .ರಿ.ಉಡುಪಿ ಜಿಲ್ಲೆ , ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಮತ್ತು ಕ್ರೀಡಾ ಇಲಾಖೆ ಉಡುಪಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ, ಲೆಕ್ಕ ಸಹಾಯಕರು, ಸಿಬ್ಬಂದಿವರ್ಗ,ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು , ನೌಕರರ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಜನವರಿ 08,09, ಹಾಗೂ 10 ರಂದು ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ‌ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಶೆಟ್ಟಿ ತಿಳಿಸಿದರು.

ಅವರು ಆರ್ .ಡಿ.ಪಿ.ಆರ್ ಇಲಾಖೆ ಅಧಿಕಾರಿಗಳು ಹಾಗೂ ನೌಕರರ ಕ್ರೀಡಾಕೂಟ ‌ಹಾಗೂ ಸಾಂಸ್ಕೃತಿಕ ‌ಕಾರ್ಯಕ್ರಮದ ಪೂರ್ವಾಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಜನವರಿ 08 ರಂದು ನೇಜಾರು ಕ್ರೀಡಾಂಗಣ ನೇಜಾರುವಿನಲ್ಲಿ ಪುರುಷರಿಗೆ ಕ್ರಿಕೆಟ್ ಪಂದ್ಯಾಟ ಮತ್ತು ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟವು ನಡೆಯಲಿದೆ.

ಜನವರಿ  9ರಂದು ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡುವಿನಲ್ಲಿ 100 ಮೀ, 200 ಮೀಟರ್ ಓಟದ ಸ್ವರ್ದೆ, ಮ್ಯೂಸಿಕಲ್ ಚೇಯರ್, ಲೆಮನ್ ಸ್ಪೂನ್ , ಗುಂಡೆಸತ, ಗೋಣಿ ಚೀಲ ಸ್ವರ್ಧೆ, 100 ಮೀಟರ್ ವೇಗದ ನಡಿಗೆ ಪ್ರತ್ಯೇಕ ಪ್ರತ್ಯೇಕ ವಿಭಾಗದಲ್ಲಿ ನಡೆಯಲಿದೆ.

ಜನವರಿ 10 ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ರಜತಾದ್ರಿ ಮಣಿಪಾಲದಲ್ಲಿ ಪೂರ್ವಾಹ್ನ 10.30 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಆರ್.ಡಿ.ಪಿ.ಆರ್  ಹಾಗೂ ಪಿಡಿಓ ಅಸೋಸಿಯೇಶನ್ ಸಂಘದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *