ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಬ್ರಹ್ಮಾವರ ತಾಲೂಕಿನ, ಪಾಂಡೇಶ್ವರ ವಲಯದ ವತಿಯಿಂದ ಗುಂಡ್ಮಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಇತ್ತೀಚಿಗೆ ಆಯೋಜಿಸಿತು. ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ. ಸತೀಶ್ ಐತಾಳ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ರಾಮಚಂದ್ರ ಐತಾಳ ಮಾತನಾಡಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇರುವುದು, ಅವರ ಸ್ವಂತ ಮನಸ್ಸಿನಿಂದಲೇ ಆಗಬೇಕು, ಅಂತರಾಷ್ಟ್ರೀಯ ಮಟ್ಟದಲ್ಲಿ ಡ್ರಗ್ಸ್ ಮಾಫಿಯಾಗಳು ಮಾನವನ ಭವಿಷ್ಯವನ್ನು ಹಾಳು ಮಾಡುವುದರದಲ್ಲಿ ತೊಡಗಿಸಿಕೊಂಡಿವೆ. ಅದರಿಂದ ದೂರ ಇರಲು ವಿದ್ಯಾರ್ಥಿಗಳು ಏನು ಮಾಡಬೇಕು, ಆ ಚಟಗಳಿಗೆ ಬೀಳದ ಹಾಗೆಯೇ ನಾವು ಏನು ಮಾಡಬೇಕು, ದುಶ್ಚಟಗಳನ್ನು ತಡೆಗಟ್ಟುವುದು ಹೇಗೆ, ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಸವಿಸ್ತಾರವಾಗಿ ಮಾಹಿತಿ ನೀಡಿದರು.
ಬ್ರಹ್ಮಾವರ ಜನಜಾಗೃತಿ ವೇದಿಕೆ ಸದಸ್ಯೆ ಸುಲತ ಹೆಗ್ಡೆ , ವಲಯದ ಮೇಲ್ವಿಚಾರಕಿ ಜಯಲಕ್ಷ್ಮೀ ಸ್ಥಳೀಯ ಸೇವಾ ಪ್ರತಿನಿಧಿ ಶೋಭಾ, ಜ್ಯೋತಿ, ಮತ್ತು ಶಾಲೆಯ ಶಿಕ್ಷಕ ವರ್ಗದವರು, ಮತ್ತು ಮಕ್ಕಳು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಬ್ರಹ್ಮಾವರ ತಾಲೂಕಿನ, ಪಾಂಡೇಶ್ವರ ವಲಯದ ವತಿಯಿಂದ ಗುಂಡ್ಮಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ. ಸತೀಶ್ ಐತಾಳ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಬ್ರಹ್ಮಾವರ ಜನಜಾಗೃತಿ ವೇದಿಕೆ ಸದಸ್ಯೆ ಸುಲತ ಹೆಗ್ಡೆ , ವಲಯದ ಮೇಲ್ವಿಚಾರಕಿ ಜಯಲಕ್ಷ್ಮೀ ಇದ್ದರು.












Leave a Reply