ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರನ್ನು ಕುಂದಾಪುರ ಶಾಸಕ ಭೇಟಿ

ಬೆಂಗಳೂರು: (ಜ: 27 ಮಂಗಳವಾರ) ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸಲು ಬಾಕಿ ಇರುವ 13,27,233 ರೂಪಾಯಿ  ಅನುದಾನವನ್ನು ಮಂಜೂರು ಮಾಡಲು ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಬೆಂಗಳೂರಿನ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾಸಚಿವರಾದ ಮಧು ಬಂಗಾರಪ್ಪ ರವರನ್ನ ಭೇಟಿ ಮಾಡಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆಯ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ಗಳನ್ನು ಒದಗಿಸಲು ಅನುದಾನದ ಕೊರತೆಯಿಂದಾಗಿ ಕ್ಲಪ್ತ ಸಮಯದಲ್ಲಿ ವಿತರಿಸಲು ತೊಂದರೆಯಾಗುತ್ತಿದ್ದು ಇದರಿಂದಾಗಿ ಶಾಲಾ ಮಕ್ಕಳ ಶೂ ಹಾಗೂ ಸಾಕ್ಸ್ ಗಳನ್ನು ಖರೀದಿಗೆ ವಿಳಂಬವಾಗುತ್ತಿದ್ದು ಬಾಕಿ ಇರುವ  ಅನುದಾನವನ್ನು ಕೂಡಲೇ ಬಿಡುಗಡೆಗೊಳಿಸುವಂತೆ  ಮನವಿ ಮಾಡಿದರು. ಇದಕ್ಕೆ ಸಚಿವರು ಸ್ಪಂದಿಸುವ ಭರವಸೆಯನ್ನು ನೀಡಿದರು.

Leave a Reply

Your email address will not be published. Required fields are marked *