ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಕ್ರಮ

ಉಡುಪಿ: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ಕುರಿತು ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ತಮ್ಮ ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ಜಾಗೃತರಾಗಿರುವುದು ಇಂದಿನ ಕಾಲಘಟ್ಟದಲ್ಲಿ ಅತ್ಯಗತ್ಯ ಎಂದು ತಿಳಿಸಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿ: ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ (CWC) ಅಡಿಯಲ್ಲಿ ಪೋಕ್ಸೋ ಬೆಂಬಲ ವ್ಯಕ್ತಿಯಾಗಿ (Pocso Support Person) ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಮೋಹಿನಿ ಅವರು ಭಾಗವಹಿಸಿ, ವಿದ್ಯಾರ್ಥಿನಿಯರಿಗೆ ಸವಿಸ್ತಾರವಾದ ಮಾಹಿತಿ ನೀಡಿದರು.

ಲೈಂಗಿಕ ದೌರ್ಜನ್ಯ ತಡೆಗಟ್ಟುವಲ್ಲಿ ಪೋಕ್ಸೋ ಕಾಯ್ದೆಯ ಮಹತ್ವ, ಕಾನೂನು ರಕ್ಷಣೆ, ದೂರು ನೀಡುವ ವಿಧಾನ ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ವಿವಿಧ ಮಗ್ಗಲುಗಳ ಬಗ್ಗೆ ಶ್ರೀಮತಿ ಮೋಹಿನಿ ಅವರು ವಿದ್ಯಾರ್ಥಿನಿಯರಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ವೃಂದ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

✍️ ಪುರುಷೋತ್ತಮ್ ಪೂಜಾರಿ ಕೊಡಪಾಡಿ

Leave a Reply

Your email address will not be published. Required fields are marked *