ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹೆಸಕುತ್ತೂರು ಪ್ರಾಥಮಿಕ ಶಾಲೆ : ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕೋಟ: ವಿದ್ಯಾರ್ಥಿಗಳಲ್ಲಿ ಹೊಸತನ್ನು ತಿಳಿಯುವ ಕುತೂಹಲ ಏನು ಏಕೆ ಹೇಗೆ ಪ್ರಶ್ನೆಗಳ ಮೂಲಕ ತನ್ನ ಸುತ್ತಲಿನ ಪ್ರಕೃತಿಯನ್ನು ಅರ್ಥಮಾಡಿಕೊಳ್ಳುವ ಆಸಕ್ತಿಯನ್ನು ಬೆಳೆಸಿ, ಅವರಲ್ಲಿ ವೈಜ್ಞಾನಿಕ ಮನೋಧರ್ಮ ಬೆಳೆಸುವಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವುದು ಸಹಕಾರಿ ಎಂದು ಹೆಸಕುತ್ತೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ನುಡಿದರು.

ಅವರು ಇತ್ತೀಚಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ಏರ್ಪಡಿಸಲಾಗಿದ್ದ ಯುರೇಕ – ವಿಜ್ಞಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ ಶಾಲಾ ವಿದ್ಯಾರ್ಥಿಗಳು ಸಿದ್ಧಪಡಿಸಿದ ನವನವೀನ ವಿಜ್ಞಾನ ಮಾದರಿಗಳ ಪ್ರದರ್ಶನ ಹಾಗೂ ಸ್ಪರ್ಧೆಯ ಜೊತೆಗೆ ವಿವಿಧ ಮಾದರಿಯ ಎಲೆಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ತೀರ್ಪುಗಾರರಾಗಿ ಹೆಸಕುತ್ತೂರು ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಉದಯ ಕುಮಾರ ಶೆಟ್ಟಿ ಹಾಗೂ ವೆಂಕಟೇಶ ಮಂಜ ಸಹಕರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಆಶಾ ಕುಲಾಲ ವಹಿಸಿದ್ದರು. ಶಾಲಾ ಸಹ ಶಿಕ್ಷಕ ರವೀಂದ್ರ ನಾಯಕ್ ವಿಜ್ಞಾನ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ, ಸಹ ಶಿಕ್ಷಕರಾದ ಸಂಜೀವ ಎಂ, ರಾಜೀವ ಕುಲಾಲ, ಗೌರವ ಶಿಕ್ಷಕಿ ಮಧುರಾ,ಎಸ್ ಡಿ ಎಂ ಸಿ ಸದಸ್ಯರಾದ ಸುವಾಸಿನಿ ಶೆಟ್ಟಿ ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಅಶೋಕ ತೆಕ್ಕಟ್ಟೆ ಸ್ವಾಗತಿಸಿ, ವಿಜಯ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಶಿಕ್ಷಕಿ ವಿಜಯಾ ಆರ್ ವಂದಿಸಿದರು ಹಾಗೂ ವಿಜ್ಞಾನ ಶಿಕ್ಷಕಿ ಸ್ವಾತಿ ಬಿ ಕಾರ್ಯಕ್ರಮ ನಿರೂಪಿಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ಏರ್ಪಡಿಸಲಾಗಿದ್ದ ಯುರೇಕ – ವಿಜ್ಞಾನ ದಿನಾಚರಣೆಯನ್ನು ಹೆಸಕುತ್ತೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಉದ್ಘಾಟಿಸಿದರು.

Leave a Reply

Your email address will not be published. Required fields are marked *