ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ ಉದ್ಘಾಟಿಸಿ ಮಕ್ಕಳು ಹೇಳಿದ್ದನ್ನು ಕೇಳುವುದಕ್ಕಿಂತ ನಾವು ಮಾಡಿದ್ದನ್ನ ಮಾಡುತ್ತಾರೆ. ನಮ್ಮನ್ನು ಅನುಕರಣೆ ಮಾಡುತ್ತಾರೆ. ಆದ್ದರಿಂದ ಉತ್ತಮ ಸಮಾಜದ ನಾಗರಿಕರನ್ನು ಸೃಷ್ಟಿ ಮಾಡುವುದು ನಮ್ಮ ಕೈಯಲ್ಲಿದೆ. ಒಳ್ಳೆಯ ಪರಿಸರವನ್ನ ನಿರ್ಮಾಣ ಮಾಡಿ ಮಕ್ಕಳಿಗೆ ಉತ್ತೇಜನ ನೀಡಬೇಕು, ವಿಜ್ಞಾನ ದಿನಾಚರಣೆ ಮಕ್ಕಳ ಬೆಳವಣಿಗೆಗೆ ಪೂರಕ ಎಂದರಲ್ಲದೆ ಸರಕಾರಿ ಶಾಲೆಯ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ ಸರಕಾರಿ ಶಾಲೆಯ ಬೆಳವಣಿಗೆಗೆ ಶ್ರಮಿಸಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಈ ವೇಳೆ ವಿದ್ಯಾರ್ಥಿಗಳಿಂದ ಮಾದರಿಗಳ ತಯಾರಿಕಾ ಸ್ಪರ್ಧಾ ಕಾರ್ಯಕ್ರಮ, ವಿಜ್ಞಾನಿಗಳ ಪರಿಚಯ ಕಾರ್ಯಕ್ರಮ, ಪರಿಸರ ಜಾಗೃತಿ ಗೀತಾ ಕಾರ್ಯಕ್ರಮ ಹಾಗೂ ಪ್ರಯೋಗಗಳ ಪ್ರಾತ್ಯಕ್ಷಿಕೆ ಮೂಡಿಬಂತು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಜಯಲಕ್ಷ್ಮೀ ಸಾಲಿಗ್ರಾಮ ಪಟ್ಟಣ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಸುಲತ ಹೆಗ್ಡೆ , ಅನ್ಯೋನ್ಯತ ಟೂರಿಸ್ಟ್ ಚಾಲಕ ಮಾಲಕ ಸಂಘದ ಅಧ್ಯಕ್ಷ ತ್ಯಾಗರಾಜ್, ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಬ್ರಹ್ಮಾವರ ತಾಲೂಕು ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಾಲಿನಿ ಎಂ.ಪಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ಸಹ ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿ ವಿಜಯ ಕುಮಾರಿ ವಂದಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ರಾಷ್ಟೀಯ ವಿಜ್ಞಾನ ದಿನಾಚರಣೆಯನ್ನು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ ಉದ್ಘಾಟಿಸಿದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಜಯಲಕ್ಷ್ಮೀ ಸಾಲಿಗ್ರಾಮ ಪಟ್ಟಣ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಸುಲತ ಹೆಗ್ಡೆ , ಅನ್ಯೋನ್ಯತ ಟೂರಿಸ್ಟ್ ಚಾಲಕ ಮಾಲಕ ಸಂಘದ ಅಧ್ಯಕ್ಷ ತ್ಯಾಗರಾಜ್ ಇದ್ದರು.












Leave a Reply