ಸಾವಳಗಿ: ಹೋಳಿ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆ ದಕ್ಕೆ ತರುವ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಕೊಳ್ಳಲಾಗುವದೆಂದು. ಸಾವಳಗಿ ಪೊಲೀಸ್ ಠಾಣೆ ಪಿಎಸ್ಐ ಅಪ್ಪಣ್ಣ ಐಗಳಿ ಹೇಳಿದರು.
ನಗರದಲ್ಲಿ ಸೋಮವಾರ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಹೋಳಿ ಹಬ್ಬವನ್ನು ಪರಸ್ಪರ ಶಾಂತಿ-ಸೌಹಾರ್ದದಿಂದ ಆಚರಿಸಿ, ನಗರದ ಶಾಂತಿ ಸುವ್ಯವಸ್ಥೆಗೆ ಸಹಕರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರು, ಹಿರಿಯರು, ಯುವಕರು ಸೇರಿದಂತೆ ಪೊಲೀಸ್ ಸಿಬ್ಬಂದಿ ಶಿವಾನಂದ ಭಜಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶಾಂತಿ, ಸೌಹಾರ್ದದಿಂದ ಹೋಳಿ ಹಬ್ಬ ಆಚರಿಸಿ: ಪಿಎಸ್ಐ ಅಪ್ಪಣ್ಣ ಐಗಳಿ
















Leave a Reply