ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಂಜು ಕೊಳ ಚೂರಿ ಇರಿತ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!!

ಮಲ್ಪೆ :  ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರ ತಂಡ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 5 ಮಂದಿ ಯುವಕರನ್ನು  ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯ ವೈಯಕ್ತಿಕ ಕಾರಣಗಳಿಂದ ನಡೆದಿದ್ದಾಗಿ ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಮಲ್ಪೆ ಬೀಚ್ ಸಮೀಪ ನಡೆದ ಚಾಕು ದಾಳಿ ಪ್ರಕರಣದಲ್ಲಿ ನಾಲ್ವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಕಾನೂನಿನ ಸಂಘರ್ಷಕ್ಕೋಳಗಾದ ಬಾಲಕನನ್ನೂ ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುತ್ತಿದೆ.

ಮಾರ್ಚ್ 3ರಂದು ರಾತ್ರಿ ಸುಮಾರು 9.30ಕ್ಕೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಬೀಚ್ ಬಳಿ ಇರುವ ಬ್ಲೂ ವೇವ್ಸ್ ಗೆಸ್ಟ್ ಹೌಸ್ ಸಮೀಪ ಈ ಘಟನೆ ನಡೆದಿದೆ. ಆರೋಪಿತರಾದ ಅಮೃತ್ ಭಂಡಾರಿ, ಪ್ರಜ್ಞೇಶ್, ಪುನಿತ್ ಪೂಜಾರಿ ಮತ್ತು ಅಭೀಜಿತ್ ಅವರು ಬಾಲಕನೊಂದಿಗೆ ಸೇರಿ ಒಂದೇ ಉದ್ದೇಶದಿಂದ ಅಕ್ರಮ ಕೂಟ ಸೇರಿಕೊಂಡು, KA19AD1036 ಸಂಖ್ಯೆಯ ಬಿಳಿ ಬೊಲೆರೊ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *