ರ್ಕೋಟ: ಅಂಬೇಡ್ಕರ್ ಅನುಭವಿಸಿಯ ಯಾತನೆ ಸಮಾಜದ ಕಣ್ಣು ತೆರೆಸಿತ್ತಲ್ಲದೆ ಕೆಳ ಮತ್ತು ಮಧ್ಯಮವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು.
ಮಂಗಳವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಅಸ್ಪ್ರಶ್ಯತೆ ಸಮಾನತೆಯ ಬಗ್ಗೆ ಸತತವಾಗಿ ಹೋರಾಟ ಮಾಡಿ ಈ ದೇಶಕ್ಕೆ ಒಂದು ಸುಂದರ ಅರ್ಥಗರ್ಭಿತ ಸಂವಿಧಾನವನ್ನು ನೀಡಿದ ಹೆಮ್ಮೆ ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಅವರು ಬದುಕಿನ ಆಯಾಮಗಳನ್ನು ಗಮನಿಸಿದರೆ ಅತ್ಯಂತ ಕ್ಲಿಷ್ಟಕರ ಸಮಸ್ಯೆಗಳನ್ನು ಅನುಭವಿಸಿ ತನ್ನಂತೆ ಎಲ್ಲರೂ ಅನುಭವಿಸಬಾರದು ಎಂಬ ಚಿಂತನೆಗಳೊಂದಿಗೆ ಆ ಕಾಲದಲ್ಲಿ ಸಂವಿಧಾನದ ಮೂಲಕ ನ್ಯಾಯ ದೊರಕಿಸಿದ್ದಾರೆ.
ಇದರ ಪರಿಣಾಮ ನೀವು ನಾವುಗಳು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯಾಚರಿಸುವಂತೆ ಮಾಡಿದೆ ಎಂದು ಪಂಚವರ್ಣ ಮದ ಈ ಕಾರ್ಯಕ್ರಮ ಇತರ ಸಂಘಟನೆಗಳಿಗೆ ಸ್ಪೂರ್ತಿಯಾಗಿದೆ ಎಂದರು.ವೇದಿಕೆಯಲ್ಲಿದ್ದ ಗಣ್ಯರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು. ಇಂಡಿಕಾ ಕಲಾ ಬಳಗದ ಸಂಚಾಲಕ ಪ್ರಭಾಕರ್ ಪಡುಕರೆ ಪ್ರಾಸ್ತಾವನೆ ಸಲ್ಲಿಸಿದರು.ಸಭಾಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ.ತಾರಾನಾಥ ಹೊಳ್ಳ ,ಪಂಚವರ್ಣದ ಸಂಚಾಲಕ ಅಮೃತ್ ಜೋಗಿ ಉಪಸ್ಥಿತರಿದ್ದರು.
ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ,ಯುವಕ ಮಂಡಲದ ಸದಸ್ಯ ಪ್ರಶಾಂತ್ ಪಡುಕರೆ ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಅಂಬೇಡ್ಕರ್ ರವರ 135ನೇ ಜಯಂತೋತ್ಸವದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು. ಶಿಕ್ಷಕ ಹೆರಿಯ ಮಾಸ್ಟರ್,ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಇದ್ದರು.















Leave a Reply