ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕöÈತಿಕ ಸ್ಪರ್ಧೆ ಆರೋಹ 2026 ಸಮಾರೋಪ ಸಮಾರಂಭ

ಕೋಟ: ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚಿಗೆ ನಡೆದ ವಿ.ವಿ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಆರೋಹ 2026ರ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ಮೂರು ಕಾಲೇಜುಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿಗಳನ್ನು ನೀಡಲಾಯಿತು.

ಪ್ರಥಮ ಬಹುಮಾನ ರೂ.40000/-ಗಳನ್ನು ಶ್ರೀ ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಪಡೆದರೆ, ದ್ವಿತೀಯ ಬಹುಮಾನ ರೂ. 30000/-ಗಳನ್ನು ಡಾ. ಬಿ. ಬಿ ಹೆಗ್ಡ ಕಾಲೇಜು ಕುಂದಾಪುರ ಪಡೆಯಿತು. ತೃತೀಯ ಬಹುಮಾನ ರೂ.20000/- ಗಳನ್ನು ಎಸ್‌ಎಮ್‌ಎಸ್ ಕಾಲೇಜು ಬ್ರಹ್ಮಾವರ ಪಡೆದುಕೊಂಡಿತು.

ಅತಿಥಿ ಸ್ಥಾನದಿಂದ ಸ್ಥಳೀಯ ಪ್ರಗತಿಪರ ಕೃಷಿಕ ಜಯರಾಮ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳ ಸಾಂಘಿಕ ಪ್ರಯತ್ನವನ್ನು ಶ್ಲಾಘಿಸಿದರು. ಸ್ಥಳೀಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನಿಸ್ ಬಾಂಜೆ ಮಾತನಾಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸಂಘಟಿಸಲಾದ ಈ ಸಾಂಸ್ಕೃತಿಕ ಸ್ಪರ್ಧೆ ಮಾದರಿಯಾಗಿ ಮೂಡಿಬಂದಿದೆ ಎಂದು ಅಭಿಪ್ರಾಯ ಪಟ್ಟರು.

ಕಾಲೇಜಿನ ಹಳೆ ವಿದ್ಯಾರ್ಥಿ ಸಿನಿಮಾ ನಟ ಪುನೀತ್ ಶೆಟ್ಟಿ ಈ ಕಾಲೇಜಿನಲ್ಲಿ ಈ ಹಿಂದೆ ತಾನು ವಿದ್ಯಾರ್ಥಿಯಾಗಿರುವಾಗ ಆರೋಹದ ಸಂಘಟನೆಯಲ್ಲಿ ಪಾಲ್ಗೊಂಡ ಅನುಭವವನ್ನು ಹಂಚಿಕೊಂಡು ವಿದ್ಯಾರ್ಥಿಗಳು ಬದುಕಿನಲ್ಲಿ ಕನಸುಗಳನ್ನು ಕಾಣಬೇಕು ಮತ್ತು ಅವುಗಳ ಬೆನ್ನತ್ತಿ ಹೋದರೆ ಮುಂದಿನ ದಿನಗಳಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ ಎಂದರು. ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್ ನಾಯಕ ಅಧ್ಯಕ್ಷತೆ ವಹಿಸಿದರು.

ಮಣೂರು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯ ಶುಭ ಹಾರೈಸಿದರು. ನಿರ್ಣಾಯಕರಾಗಿ ವಿದುಷಿ ದೀಕ್ಷಾ ವಿ , ನಿತಿನ್ ಶೆಟ್ಟಿ , ಹಾಗೂ ಗೋಪಾಲ ಗಾಣಿಗ ಇವರು ಆಗಮಿಸಿದರು ., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ರಮೇಶ್ ಆಚಾರ್ ಉಪಸ್ಥಿತರಿದ್ದರು.

ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚಿಗೆ ನಡೆದ ವಿ.ವಿ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಆರೋಹ 2026ರ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ಮೂರು ಕಾಲೇಜುಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿಗಳನ್ನು ನೀಡಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನಿಸ್ ಬಾಂಜೆ, ಸ್ಥಳೀಯ ಪ್ರಗತಿಪರ ಕೃಷಿಕ ಜಯರಾಮ ಶೆಟ್ಟಿ, ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್ ನಾಯಕ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ರಮೇಶ್ ಆಚಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *