ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ..! ಅಕ್ರಮ ಕಡತಗಳ ವಶ

ಉಡುಪಿ: ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಿಂದ ಶೋಧನಾ ವಾರಂಟ್ ಪಡೆದು, ಇಂದು (29/05/2026) ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗಳಲ್ಲಿ ದಾಳಿ ನಡೆಸಲಾಗಿದೆ.

ಮಂಗಳೂರು ಲೋಕಾಯುಕ್ತ ಎಸ್.ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಉಡುಪಿ ಲೋಕಾಯುಕ್ತ ಡಿ.ವೈ.ಎಸ್.ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ್ ಹಾಗೂ ಮಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಶ್ರೀಮತಿ ಭಾರತಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ದಾಳಿಯ ವೇಳೆ ವಿಲೇವಾರಿಗೆ ಬಾಕಿಯಿದ್ದ ಹಲವಾರು ಕಡತಗಳು ಪತ್ತೆ, ನಿಯಮ ಬಾಹಿರವಾಗಿ ವಿಲೇವಾರಿ ಮಾಡಿದ ಕಡತಗಳು ಗುರುತು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದ ಲೋಕಾಯುಕ್ತ ತಂಡಈ ಸಂಬಂಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಕುರಿತು, ಬೆಂಗಳೂರು ಲೋಕಾಯುಕ್ತರಿಗೆ ವಿವರವಾದ ವರದಿ ಸಲ್ಲಿಸಲಾಗುತ್ತಿದೆ.

ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾದ ಈ ದಾಳಿ, ಆಡಳಿತ ವ್ಯವಸ್ಥೆಯಲ್ಲಿ ಅಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಸಂದೇಶ ನೀಡಿದೆ.

Leave a Reply

Your email address will not be published. Required fields are marked *