ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬಹುಮುಖ ಪ್ರತಿಭೆ ಮಣೂರಿನ ಪ್ರಭಾಕರ್‌ರಿಗೆ ಅಕ್ಷರದಕ್ಕರೆ ವಿಶೇಷ ಗೌರವ

ಕೋಟ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹೋಬಳಿ ಘಟಕ ಕೋಟ ಇವರ ಆಶ್ರಯದಲ್ಲಿ ಕೋಟ ಸಿ ಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ನಡೆದ `ಅಕ್ಷರದಕ್ಕರೆ-2026′ ಕಾರ್ಯಕ್ರಮದಲ್ಲಿಸಮುದಾಯ ಸಾಧಕ ಪುರಸ್ಕಾರವನ್ನು ಉಪನ್ಯಾಸಕ ಮಂಜುನಾಥ್, ಬಿಎಸ್ ಎನ್ ಎಲ್ ಪ್ರಮುಖ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಣೂರಿನ ಪ್ರಭಾಕರ್ ಇವರುಗಳಿಗೆ ನೀಡಿ ಗೌರವಿಸಲಾಯಿತು.

ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್,ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ,ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ದಸoಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ್ ಗಿಳಿಯಾರು ಸೇರಿದಂತೆ ಅನೇಕರು ಉಸ್ಥಿತರಿದ್ದರು.

Leave a Reply

Your email address will not be published. Required fields are marked *