ಸೋಮವಾರ ಬೆಳಗ್ಗೆ 9:30ಕ್ಕೆ ಶಾಲಾ ಆರಂಭೋತ್ಸವ ಮತ್ತು ಪೋಷಕರ ಮಹಾಸಭೆ ನಡೆಯಿತು. ಕೋಣಿ ಕ್ಲಸ್ಟರ್ ಸಿ. ಆರ್. ಪಿ ಶ್ರೀಮತಿ ಸುಮನಾ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಶ್ರೀಮತಿ ಗುಲಾಬಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು.
ಎಲ್ಲಾ ವಿದ್ಯಾರ್ಥಿಗಳಿಗೆ ಬಲೂನು ನೀಡಿ ಸ್ವಾಗತಿಸಲಾಯಿತು. ಪೋಷಕರು ರಂಗೋಲಿ ಮತ್ತು ಬಣ್ಣದ ಕಾಗದದಿಂದ ಶಾಲೆಯನ್ನು ಸಿಂಗರಿಸಿದರು. ಬಳ್ಕೂರು ಗ್ರಾಮ ಪಂಚಾಯಿತ್ ನ ಮಾಜಿ ಉಪಾಧ್ಯಕ್ಷರಾದ ಶ್ರೀ ಅಶೋಕ್, ಕುಂದಾಪುರ ತಾಲೂಕು ಎಸ್. ಡಿ.ಎಂ.ಸಿ ಸಮನ್ವಯ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಶಶಿ ಬಳ್ಕೂರು, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಗೀತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗುರುರಾಜ್, ಗೌರವ ಶಿಕ್ಷಕಿ ಶ್ರೀಮತಿ ಶೈಲಾ, ಸರ್ವ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕರಾದ ಶ್ರೀನಾಥ ಜಿ ಪೂಜಾರಿ ಅವರು ಈ ಶೈಕ್ಷಣಿಕ ವರ್ಷದ ಯೋಜನೆಗಳ ಬಗ್ಗೆ ವಿವರಿಸಿದರು. ಸಹ ಶಿಕ್ಷಕರಾದ ಶ್ರೀ ರಾಘವೇಂದ್ರ ಗುಲ್ವಾಡಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.















Leave a Reply