ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆ

ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಜರುಗಿತು. ಶಾಲಾ ಮಕ್ಕಳಿಗೆ ಆರತಿಯನ್ನು ಬೆಳಗಿ ತಿಲಕವಿತ್ತು ಹೂ ಹೂ ಪಕಳೆಗಳ ಸಿಂಚನದಿಂದ ವಿಶೇಷವಾಗಿ ಸ್ವಾಗತಿಸಲಾಯಿತು. ಶಾಲಾ ಮಕ್ಕಳು ಪ್ರಾರ್ಥನೆಯನ್ನು ಹಾಡಿ ಕಾರ್ಯಕ್ರಮ ಆರಂಭಿಸಲಾಯಿತು. ಶಾಲಾ ಶಾಲಾ ಮುಖ್ಯ ಅಧ್ಯಾಪಿಕೆ ಯವರಾದ ಶ್ರೀಮತಿ ವಿನುತ ಎಸ್ ನಾಯಕ್ ಎಲ್ಲರನ್ನೂ ಸ್ವಾಗತಿಸಿದರು.

ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸುರೇಂದ್ರ ಮೆನ್ಡನ್ ಅವರು ,ಮಕ್ಕಳು ತಂದೆ ತಾಯಿಯವರಿಗೆ ಹಾಗೂ ಹಿರಿಯರಿಗೆ ಅಧ್ಯಾಪಕರಿಗೆ ಗೌರವವನ್ನು ನೀಡಬೇಕೆಂದು ಸೂಚಿಸಿದರು. ಶಿಕ್ಷಕಿಯರಾದ ಶ್ರೀಮತಿ ವೀಣಾ ಕಾಮತ್ ದಿನದ ಮಹತ್ವದ ಬಗ್ಗೆ ವಿವರಿಸಿದರು. ಶ್ರೀಮತಿ ವಿದ್ಯಾ ಸಂಯೋಜಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಜಯಲಕ್ಷ್ಮಿ ವಂದನಾರ್ಪಣೆ ಗೈದರು. ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Leave a Reply

Your email address will not be published. Required fields are marked *