ಕೋಟ: ಯೋಗದಿಂದ ಮನುಷ್ಯನ ಆರೋಗ್ಯಕ್ಕೆ ಪೂರಕ ವಾತಾವರಣ ಕಲ್ಪಿಸುವುದರ ಜೊತೆಗೆ ಮನಸ್ಸು ಪರಿಶುದ್ಧತೆಯನ್ನು ನೀಡುತ್ತದೆ ಎಂದು ಆಟ್9 ಆಫ್ ಲಿವಿಂಗ್ ಇದರ ಸದಸ್ಯ ಶೇವಧಿ ಸುರೇಶ್ ಗಾಣಿಗ ಅಭಿಪ್ರಾಯಪಟ್ಟರು.
ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಹಾಗೂ ಬಾರಿಕೆರೆ ಯುವಕ ಮಂಡಲದ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸರ್ವರೋಗಕ್ಕೆ ಯೋಗದಿಂದ ಮುಕ್ತಿಗಾಣಿಸಲು ಸಾಧ್ಯ,ಯೋಗ ಒಂದೇ ದಿನಕ್ಕೆ ಸಿಮಿತಗೊಳ್ಳದೆ ವರ್ಷದ ಎಲ್ಲಾ ದಿನಗಳಲ್ಲಿ ಅನುಷ್ಠಾನ ಮಾಡುವಂತ್ತಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ ಕುಂದರ್,ಮಾಜಿ.ಜಿ.ಪo ಸದಸ್ಯ ರಾಘವೇಂದ್ರ ಕಾಂಚನ್, ಪoಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಹಾಗೂ ಬಾರಿಕೆರೆ ಯುವಕ ಮಂಡಲದ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಆರ್ಟ್ಆಫ್ ಲಿವಿಂಗ್ ಇದರ ಸದಸ್ಯ ಶೇವಧಿ ಸುರೇಶ್ ಗಾಣಿಗ ಭಾಗವಹಿಸಿದರು. ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ ಕುಂದರ್, ಮಾಜಿ.ಜಿ.ಪo ಸದಸ್ಯ ರಾಘವೇಂದ್ರ ಕಾಂಚನ್, ಪoಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಇದ್ದರು.















Leave a Reply