ಕೋಟ : ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು ಇದರಿಂದ ಒಂದಿಷ್ಟು ಜೀವ ಉಳಿಸಲು ಸಾಧ್ಯವಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು.
ಭಾನುವಾರ ಮಾಂಗಲ್ಯ ಮಂದಿರ ಕೋಟ ಇಲ್ಲಿ ಮೊಗವೀರ ಯುವ ಸಂಘಟನೆ ಕೋಟ ಘಟಕ ಹಾಗೂ ಮಹಿಳಾ ಸಂಘಟನೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ರಕ್ತನಿಧಿ ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ ಮತ್ತು ಜಿಲ್ಲಾಡಳಿತ ಉಡುಪಿ ಇವರುಗಳ ಜಂಟಿ ಆಶ್ರಯದಲ್ಲಿ ವಿವಿಧ ಸ್ಥಳೀಯ ಸಂಘಟನೆಗಳಾದ ಬಾರಿಕೆರೆ ಯುವಕ ಮಂಡಲ ಕೋಟ, ಅರಮನೆ ವಿಜಯ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಪಡುಕರೆ, ಬಾಳೆಬೆಟ್ಟು ಫ್ರೆಂಡ್ಸ್ , ಹರ್ತಟ್ಟು ಯುವಕ ಮಂಡಲ ಕೋಟ ಹಾಗೂ ವಿನಾಯಕ ಫ್ರೆಂಡ್ಸ್ ಕೋಟತಟ್ಟು ಪಡುಕರೆ ಇವರುಗಳ ಸಹಯೋಗದೊಂದಿಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಮೊಗವೀರ ಯುವ ಸಂಘಟನೆ ರಕ್ತದಾನದಂತ ಸಾಮಾಜಿಕ ಕಾರ್ಯಕ್ರಮಗಳಿಗೆ ವಿಶೇಷ ಮನ್ನಣೆಇತ್ತು ಮಾದರಿಯಾಗಿದೆ.
ನಾಡೋಜ ಡಾ.ಜಿ.ಶಂಕರ್ ಇವರ ಮಾರ್ಗದರ್ಶನದಲ್ಲಿ ಮೊಗವೀರ ಯುವ ಸಂಘಟನೆ ಬಲಿಷ್ಠವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರವೀಶ್ ಶ್ರೀಯಾನ್ ಮಾತನಾಡಿ ಆರೋಗ್ಯವಂತ ಸಮಾಜಕಟ್ಟಲು ರಕ್ತದಾನದಂತಹ ಕಾರ್ಯಕ್ರಮಗಳು ಮಹತ್ವ ಪಡೆದು ಕೊಂಡಿದೆ, ಉಡುಪಿ ಜಿಲ್ಲೆ ರಕ್ತದಾನಿಗಳ ಜಿಲ್ಲೆ ಎಂಬ ಮನ್ನಣೆ ಪಡೆದುಕೊಂಡಿದ್ದು ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಮೂಲಕ ಮೊಗವೀರ ಸಂಘಟನೆ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದರು.ರಕ್ತದಾನ ಕುರಿತಾಗಿ ಕೆ.ಎಂ.ಸಿ ರಕ್ತನಿಧಿ ವಿಭಾಗದ ಡಾ.ವಿಶ್ವೇಶ ಸಮಗ್ರ ಮಾಹಿತಿ ನೀಡಿದರು.
ಇದೇ ವೇಳೆ ರಕ್ತದಾನಗೈದ ರಕ್ತದಾನಿಗಳನ್ನು ಗುರುತಿಸಿ ಗೌರವಿಸಲಾಯಿತು. ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜಿತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಮಾಜಿ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಂ,ಕೋಟ ಘಟಕದ ಮಾಜಿ ಅಧ್ಯಕ್ಷ ರಮೇಶ್ ವಿ ಕುಂದರ್,ಬಾರಿಕೆರೆ ಯುವಕ ಮಂಡಲದ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಬಾಳೆಬೆಟ್ಟು ಫ್ರೆಂಡ್ಸ್ ಅಧ್ಯಕ್ಷ ರತ್ಮಾಕರ ಪೂಜಾರಿ, ವಿನಾಯಕ ಫ್ರೆಂಡ್ಸ್ ಅಧ್ಯಕ್ಷ ಪ್ರಶಾಂತ್ ಮಟಪಾಡಿ, ಮೊಗವೀರ ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಭಾಸ್ಕರ್, ಕೆ.ಎಂಸಿ ರಕ್ತನಿಧಿ ವಿಭಾಗದ ಡಾ.ಸಹನಾ, ಶೇಖರ್ ತೋಳಾರ್ ಮತ್ತಿತರರು ಉಪಸ್ಥಿತರಿದ್ದರು.
ಘಟಕದ ರವಿಕಿರಣ್ ಕೋಟ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಮೊಗವೀರ ಯುವ ಸಂಘಟನೆ ಕೋಟ ಘಟಕ ಹಾಗೂ ಮಹಿಳಾ ಸಂಘಟನೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ರಕ್ತನಿಧಿ ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ ಮತ್ತು ಜಿಲ್ಲಾಡಳಿತ ಉಡುಪಿ ಇವರುಗಳ ಜಂಟಿ ಆಶ್ರಯದಲ್ಲಿ ವಿವಿಧ ಸ್ಥಳೀಯ ಸಂಘಟನೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರವೀಶ್ ಶ್ರೀಯಾನ್, ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜಿತ್ ಕುಮಾರ್, ಮಾಜಿ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಂ ಇದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ರಕ್ತದಾನಿಗಳ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.











Leave a Reply