ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರ : ಅಂಬಲಪಾಡಿ ಬಂಕೇರಕಟ್ಟ ಕೃಷಿ ಗದ್ದೆಯಲ್ಲಿ ನಟ್ಟಿ ಕಾರ್ಯಕ್ರಮ

ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರ ವತಿಯಿಂದ ಅಂಬಲಪಾಡಿ ಬಂಕೇರಕಟ್ಟದಲ್ಲಿ ವಾರ್ಡ್ ನ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್ ಅವರ ನೇತೃತ್ವದಲ್ಲಿ ಕೆಸರು ಗದ್ದೆಯಲ್ಲಿ ಸಾಮೂಹಿಕ ನೇಜಿ ನೆಡುವ ನಟ್ಟಿ ಕಾರ್ಯಕ್ರಮವು ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಅವರ ಅಧ್ಯಕ್ಷತೆಯಲ್ಲಿ ರವಿವಾರ ನಡೆಯಿತು.

ಉಡುಪಿ ಶಾಸಕರಾದ ಯಶ್ಪಾಲ್ ಎ. ಸುವರ್ಣ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಹಿರಿಯ ಪ್ರಗತಿಪರ ಕೃಷಿಕರಾದ ಸರೋಜಿನಿ ಪೂಜಾರ್ತಿ, ಜಾನಕಿ ಪೂಜಾರ್ತಿ, ಭವಾನಿ ಪೂಜಾರ್ತಿ, ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಸವಿತಾ ಸಂತೋಷ್ ಹಾಗೂ ವಾಣಿ ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು. ಸಾಂಪ್ರದಾಯಿಕವಾಗಿ ಗದ್ದೆಗೆ ಹಾಲೆರೆಯುವ ಮೂಲಕ ಸಾಮೂಹಿಕ ನೇಜಿ ನೆಡುವ ನಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್ಐಆರ್ ಮಂಗಳೂರು ವಿಭಾಗ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ, ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಜಾತ ಶೆಟ್ಟಿ, ಭಾರತಿ ಭಾಸ್ಕರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಸ್ಥಾನೀಯ ಸಮಿತಿ ಅಧ್ಯಕ್ಷರಾದ ಗಿರೀಶ್ ಸಮೀನ್ ಕಿದಿಯೂರು, ಶ್ರೀ ನಾಗರಾಜ ಸೇವಾ ಸಮಿತಿಯ ಅಧ್ಯಕ್ಷ ಶಿವಾಜಿ ಸನಿಲ್, ಗೌರವಾಧ್ಯಕ್ಷ ವಿಶ್ವನಾಥ ಹೆಗ್ಡೆ, ಎನ್.ಸಿ. ಯೂತ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್(ರಿ.) ಸಂಘಟನಾ ಕಾರ್ಯದರ್ಶಿ ನವೀನ್ ಸುವರ್ಣ, ಗೌರವ ಸಲಹೆಗಾರ ಸದಾನಂದ ಜಿ.ಕಾಂಚನ್ ಸಹಿತ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಸ್ಥಳೀಯ ಯುವಕ-ಯುವತಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸ್ಥಳೀಯ ಮಹಿಳೆಯರ ಸಹಕಾರದಿಂದ ವಾಣಿ ಪ್ರಭಾಕರ್ ಅವರ ನಿವಾಸದಲ್ಲಿ ಸಾಮೂಹಿಕ ಭೋಜನ ನಡೆಯಿತು.

Leave a Reply

Your email address will not be published. Required fields are marked *