ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮುಕುಂದ ಕೃಪಾ ಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ

ಎಲ್ಲಾ ಪೋಷಕರು ಶಾಲೆಯ ಅಭಿವೃದ್ಧಿ ಕಾರ್ಯಗಳಲ್ಲಿ ಕೈಜೋಡಿಸಬೇಕು ಹಾಗೂ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕಲಿಸಬೇಕು ಎಂದು ಶಾಲಾ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ರಂಗ ಪೈ ಮುಕುಂದ ಕೃಪಾ ಶಾಲೆಯಲ್ಲಿ ನಡೆದ ಪೋಷಕ ಶಿಕ್ಷಕರ ಸಭೆಯಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ ನುಡಿದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿನುತಾ ಎಸ್ ನಾಯಕ್ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು . ಶಾಲಾ ಶಿಕ್ಷಕರಕ್ಷಕ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಸುರೇಂದ್ರ ಮೆಂಡನ್ ಶುಭ ಹಾರೈಸಿದರು. ಶಾಲಾ ನೂತನ ಶೈಕ್ಷಣಿಕ ವರ್ಷದರಕ್ಷಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಶ್ರೀ ಗಣೇಶ್ ಶೆಣೈ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆಯಾದ ರು. ಶಾಲಾ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಗತ ವರ್ಷದ ವರದಿ ವಾಚಿಸಿದರು. ಶ್ರೀಮತಿ ವೀಣಾ ಕಾಮತ್ ಕಾರ್ಯಕ್ರಮ ಸಂಯೋಜಿಸಿದರು. ಶ್ರೀಮತಿ ನಂದಾ ವಂದನಾರ್ಪಣೆಗೈದರು.

Leave a Reply

Your email address will not be published. Required fields are marked *