ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರೋಟರಿ ಕ್ಲಬ್ ಕೋಟ ಬ್ರಿಗೇಡ್‌ನಿಂದ ಆರೋಗ್ಯ ಸಹಾಯಕ ಸಾಧನಗಳ ವಿತರಣೆ

ಕೋಟ : ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಬನ್ನಾಡಿ ಗ್ರಾಮದ ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ವಿಶೇಷ ಅಗತ್ಯವಿರುವ ಫಲಾನುಭವಿಗಳಿಗೆ ವೀಲ್‌ಚೇರ್ ಹಾಗೂ ವಿವಿಧ ಆರೋಗ್ಯ ಸಂಬAಧಿತ ಸಹಾಯಕ ಸಾಧನಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅವರು ಮಾತನಾಡಿ, ಸಮಾಜದ ದುರ್ಬಲ ವರ್ಗದವರಿಗೆ ನೆರವಾಗುವುದು ರೋಟರಿಯ ಪ್ರಮುಖ ಧ್ಯೇಯವಾಗಿದ್ದು, ಅಗತ್ಯವಿರುವವರಿಗೆ ಆರೋಗ್ಯ ಸಹಾಯಕ ಸಾಧನಗಳನ್ನು ಒದಗಿಸುವ ಮೂಲಕ ಅವರ ದೈನಂದಿನ ಬದುಕನ್ನು ಸುಗಮಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಇಬ್ಬರು ಫಲಾನುಭವಿಗಳಿಗೆ ವೀಲ್‌ಚೇರ್ ಸೇರಿದಂತೆ ಅಗತ್ಯ ಆರೋಗ್ಯ ಪರಿಕರಗಳನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ವಲಯ ಸೇನಾನಿ ದಯಾನಂದ ಆಚಾರ್, ಸದಸ್ಯರಾದ ಡಾ. ಗಣೇಶ್, ವೆಂಕಟೇಶ್ ಆಚಾರ್ , ಭಾಸ್ಕರ್ ಪೂಜಾರಿ, ಪ್ರಕಾಶ್ ಹಂದಟ್ಟು, ಪ್ರಥ್ವಿನ್ ಸಿ ಮೆಂಡನ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಬನ್ನಾಡಿ ಗ್ರಾಮದ ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ವಿಶೇಷ ಅಗತ್ಯವಿರುವ ಫಲಾನುಭವಿಗಳಿಗೆ ವೀಲ್‌ಚೇರ್ ಹಾಗೂ ವಿವಿಧ ಆರೋಗ್ಯ ಸಂಬoಧಿತ ಸಹಾಯಕ ಸಾಧನಗಳನ್ನು ವಿತರಿಸಲಾಯಿತು. ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ವಲಯ ಸೇನಾನಿ ದಯಾನಂದ ಆಚಾರ್, ಸದಸ್ಯರಾದ ಡಾ. ಗಣೇಶ್, ವೆಂಕಟೇಶ್ ಆಚಾರ್ ಇದ್ದರು.

Leave a Reply

Your email address will not be published. Required fields are marked *