ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಯ್ಕೆಗೊಂಡ ಜಿ. ತಿಮ್ಮ ಪೂಜಾರಿ ಅವರ ಪದಪ್ರದಾನ ಸಮಾರಂಭ ಜು.26ರಂದು ಬೆಳಿಗ್ಗೆ 10ಗ ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಭವನದಲ್ಲಿ ಜರುಗಲಿದೆ.ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಅಧ್ಯಕ್ಷತೆಯಲ್ಲಿ ಈ ನಡೆಯಲಿದ್ದು, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.
ಕೋಟ ಬ್ಲಾಕ್ ಕಾಂಗ್ರೆಸ್ ಪ್ರಸ್ತುತ ಅಧ್ಯಕ್ಷ ಶಂಕರ್ ಕುಂದರ್ ,ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ, ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಐವನ್ ಡಿಸೋಜ ಹಾಗೂ ಎಂ. ಎ. ಗಫೂರ್, ಕೆ.ಪಿ.ಸಿ.ಸಿ. ವಕ್ತಾರರಾದ ಸುಧೀರ್ ಕುಮಾರ್ ಮರೋಳಿ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೋಟ ಬ್ಲಾಕ್ ಕಾಂಗ್ರೆಸ್ ತಿಳಿಸಿದೆ.














Leave a Reply