ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ  ” ವಿದ್ಯಾರ್ಥಿ ಸಂಘ” ದ ಉದ್ಘಾಟನೆ

ಉಡುಪಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘವನ್ನುಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು  ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಗದೀಶ ನಾವುಡರವರು ಮಾತನಾಡಿ,  ವಿದ್ಯಾರ್ಥಿಗಳು ಯಶಸ್ಸಿನ ಮೆಟ್ಟಿಲುಗಳನ್ನೇರಲು ಛಲ ಮತ್ತು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡುತ್ತಾ  ಹಲವು ಮಹಾನ್ ವ್ಯಕ್ತಿಗಳ ಸಾಧನೆಯನ್ನು ಎಳೆ ಎಳೆಯಾಗಿ ವಿದ್ಯಾರ್ಥಿಗಳಿಗೆ ವಿವರಿಸಿದರು.

ಗೌರವ ಕಾರ್ಯದರ್ಶಿಗಳಾದ ಡಾ.ಎ.ಪಿ ಭಟ್ ಮತ್ತು ಗೌರವ ಖಜಾಂಚಿ ಸಿಎ ಟಿ. ಪ್ರಶಾಂತ್ ಹೊಳ್ಳರು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ನೀಡಿ ಶುಭ ಹಾರೈಸಿದರು. ಪರಮಪೂಜ್ಯ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲು ಬೇಕಾದ ಜ್ಞಾನ ಸಂಪಾದನೆಯ ಅಗತ್ಯವನ್ನು  ಒತ್ತಿ ತಿಳಿಸಿದರು.

ಪ್ರಾಂಶುಪಾಲರಾದ ಸಿ.ಸುರೇಶ ತುಂಗ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಗೌಪ್ಯ ಪ್ರಮಾಣ ವಚನವನ್ನು ಬೋಧಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಉಪನ್ಯಾಸಕಿಯರಾದ ಶ್ರೀಮತಿ ಉಷಾಕಿರಣ್ ಶೆಟ್ಟಿ ಮತ್ತು ಶ್ರೀಮತಿ ದಿವ್ಯ, ವಿದ್ಯಾರ್ಥಿ ನಾಯಕಿ ಕುಮಾರಿ ಆಶ್ನಿ ಸಿಯೋನಾ ಸಲ್ದಾನಾ, ಕಾರ್ಯದರ್ಶಿ ಕುಮಾರಿ ಗೌರಿ ದೀಕ್ಷಿತ್ ಮತ್ತು ಜೊತೆ ಕಾರ್ಯದರ್ಶಿ ವಿನೀತ್ ಶೆಟ್ಟಿ ಉಪಸ್ಥಿತರಿದ್ದರು.

ಶ್ರೀಮತಿ ಉಷಾಕಿರಣ್ ಸ್ವಾಗತಿಸಿದರು, ಶ್ರೀಮತಿ ದಿವ್ಯ ವಂದಿಸಿದರು. ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ  ರೋಶನಿ ನವೀನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜು ವಿದ್ಯಾರ್ಥಿಗಳಿಂದ ಕಾರ್ಯಕ್ರಮ ವೈವಿದ್ಯ ನಡೆಯಿತು.

Leave a Reply

Your email address will not be published. Required fields are marked *