ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ ಜಿಲ್ಲಾ ನ್ಯಾಯಾಲಯದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್: ಉಡುಪಿ ವಕೀಲರ ಸಂಘದ ಅಧ್ಯಕ್ಷರಿಗೆ ಭಾರಿ ಮುಖಭಂಗ

ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಅವರ ವೈಯಕ್ತಿಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ (Principal Senior Civil Judge and CJM Udupi) ಒ.ಎಸ್. ಸಂಖ್ಯೆ 10/2026 ದಾಖಲಾಗಿತ್ತು.

ಮಾನ್ಯ ಜಿಲ್ಲಾ ನ್ಯಾಯಾಧೀಶರು ದಿನಾಂಕ 09/07/2026ರಂದು ಹೊರಡಿಸಿದ ಆಡಳಿತಾತ್ಮಕ ಆದೇಶದಂತೆ ಈ ಪ್ರಕರಣವನ್ನು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ (1 Additional Senior Civil judge and ACJM Udupi) ವರ್ಗಾಯಿಸಲಾಗಿತ್ತು.

ಜಿಲ್ಲಾ ನ್ಯಾಯಾಧೀಶರ ಈ ಆಡಳಿತಾತ್ಮಕ ಆದೇಶಕ್ಕೆ ತಡೆ ನೀಡುವಂತೆ ಕೋರಿ ರೆನಾಲ್ಡ್ ಪ್ರವೀಣ್ ಕುಮಾರ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು WP No. 23018/2026 ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ಮೊದಲ ವಿಚಾರಣೆಯ ಹಂತದಲ್ಲೇ ವಜಾಗೊಳಿಸಿದೆ. ಈ ಮೂಲಕ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಉಚ್ಚ ನ್ಯಾಯಾಲಯವು ಎತ್ತಿಹಿಡಿದಿದೆ.

Leave a Reply

Your email address will not be published. Required fields are marked *