ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಡಿ ಶಾಲೆಯಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಹೊಂದಿದ ವಿಜಯ ನಾಯರಿಗೆ ಗೌರವ ಸಂಮ್ಮಾನ, ಬಿಳ್ಕೋಡುಗೆ

ಕೋಟ: ಇಲ್ಲಿನ ಕೋಡಿ ಕನ್ಯಾಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ವರ್ಷಗಳ ದೀರ್ಘ ಸೇವೆ ಸಲ್ಲಿಸಿದ ನಿವೃತ್ತರಾದ ವಿಜಯ ಕೆ.ನಾಯರಿ ಅವರಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯಿಂದ ನಿವೃತ್ತಿ ಸನ್ಮಾನ ಸಮಾರಂಭವನ್ನು ಶುಕ್ರವಾರ ಶಾಲಾ ಸಭಾಂಗಣದಲ್ಲಿ ಜರಗಿತು.

ನಿವೃತ್ತ ಶಿಕ್ಷಕ ವಿಜಯ ನಾಯರಿ ಇವರನ್ನು ಸನ್ಮಾನಿಸಿ ಗೌರವಿಸಿ ಬಿಳ್ಕೋಡುಗೆ ಗೌರವ ನೀಡಲಾಯಿತು. ಸಹದ್ಯೋಗಿ ಬಂಧುಗಳು, ಅಭಿಮಾನಿಗಳು, ಗ್ರಾಮಸ್ಥರು, ದೈಹಿಕ ಶಿಕ್ಷಕರ ಸಂಘ ಬ್ರಹ್ಮಾವರ,ಶ್ರೀ ರಾಮಪ್ರಸಾದಿತ ಯಕ್ಷಗಾನ ಮಂಡಳಿ ಕೋಡಿ ಕನ್ಯಾಣ ಇವರುಗಳ ವತಿಯಿಂದ ಗೌರವಿಸಲಾಯಿತು. ಇದೇ ವೇಳೆ ವರ್ಗಾವಣೆಗೊಂಡ ಶಿಕ್ಷಕಿ ರಮಣಿ ಇವರನ್ನು ಗೌರವಿಸಿಕೊಳ್ಳಲಾಯಿತು.ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಉದ್ಯಮಿ ಶಿವ ಕರ್ಕೇರ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಕೋಟ ಮೂರ್ತೆದಾರ ಸಹಕಾರಿ ಸಂಘದ ಅಧ್ಯಕ್ಷ ಕೊರಗ ಪೂಜಾರಿ,ಕೋಡಿ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಲಕ್ಷ್ಮಣ ಸುವರ್ಣ, ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕೋಡಿ ಮೀನುಗಾರರ ಸಂಘದ ಅಧ್ಯಕ್ಷ ಅಶೋಕ್ ತಿಂಗಳಾಯ,ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣ ಮಾಸ್ಟರ್, ಕೋಡಿ ರಾಮಾಂಜನೇಯ ವಿವಿಧೋದ್ದೇಶ ಸಂಘದ ಉಪಾಧ್ಯಕ್ಷ ಮಹಾಬಲ ಕುಂದರ್, ಸಿಇಒ ರಾಘವೇಂದ್ರ ಕರ್ಕೇರ,ಜಿಲ್ಲಾ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ,ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕಿ ಅನ್ನಪೂರ್ಣೇಶ್ವರಿ ,ದೈಹಿಕ ಶಿಕ್ಷಕ ಸಂಘದ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ,ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಕುಮಾರ್ ಕೋಡಿ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯನಿ ಸಂಪ ಟೀಚರ್ ಪ್ರಾಸ್ತಾವಿಕ ನುಡಿಗಳನ್ಮಾಡಿ ವಂದಿಸಿದರು.ಸನ್ಮಾನ ಪತ್ರವನ್ನು ಸಹ ಶಿಕ್ಷಕಿ ಜ್ಯೋತಿ ವಾಚಿಸಿದರು. ಶಾಲಾ ಸಹಶಿಕ್ಷಕ ಅಶೋಕ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ನಿರೂಪಿಸಿದರು. ಕೋಡಿ ಕನ್ಯಾಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ವರ್ಷಗಳ ದೀರ್ಘ ಸೇವೆ ಸಲ್ಲಿಸಿದ ನಿವೃತ್ತರಾದ ವಿಜಯ ಕೆ.ನಾಯರಿ ಅವರಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯಿಂದ ನಿವೃತ್ತಿ ಸನ್ಮಾನ ಕಾರ್ಯಕ್ರಮ ಜರಗಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ,ಉದ್ಯಮಿ ಶಿವ ಕರ್ಕೇರ,ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಕೋಟ ಮೂರ್ತೆದಾರ ಸಹಕಾರಿ ಸಂಘದ ಅಧ್ಯಕ್ಷ ಕೊರಗ ಪೂಜಾರಿ ಇದ್ದರು.

Leave a Reply

Your email address will not be published. Required fields are marked *