ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟೇಶ್ವರ-ಮೊಗವೀರ ಯುವ ಸಂಘಟನೆ ಜಿಲ್ಲಾದ್ಯಂತ ಬಲಿಷ್ಠ ಸಂಘವಾಗಿ ರೂಪುಗೊಂಡಿದೆ-ರವೀಶ್ ಕೊರವಡಿ

ಕೋಟ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಇದರ 21’ನೇ ವಾರ್ಷಿಕ ಮಹಾಸಭೆ ಹಾಗೂ ವನಮೋತ್ಸವ ಕಾರ್ಯಕ್ರಮವು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ರವೀಶ್ ಎಸ್. ಕೊರವಡಿ ಸಮಾರಂಭವನ್ನು ಉದ್ಘಾಟಿಸಿ, ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕವು ಜಿಲ್ಲೆಯಲ್ಲೇ ಬಲಿಷ್ಠವಾದ ಘಟಕವಾಗಿದ್ದು, ಪ್ರತೀ ವರ್ಷವೂ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ತನ್ನ ವಾರ್ಷಿಕ ಮಹಾಸಭೆಯನ್ನು ನಡೆಸಿ ಎಲ್ಲರಿಗೂ ಮಾದರಿಯಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶಂಸೆಯ ಮಾತನ್ನಾಡಿದರು.

ಇದೇ ವೇಳೆ ವರದಿ ಮತ್ತು ಲೆಕ್ಕಪತ್ರಗಳಿಗೆ ಸರ್ವ ಸದಸ್ಯರ ಅನುಮೋದನೆ ಪಡೆಯಲಾಯಿತು.ಘಕಟ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ತನ್ನ ಮೊದಲ ಪ್ರಯತ್ನದಲ್ಲೇ ಸಿಎ ಪರಿಕ್ಷೆಯಲ್ಲಿ ತೇರ್ಗಡೆ ಹೊಂದಿದ ಅನುಷ್ಕ ಎ. ಕುಂದರ್ ಅವರನ್ಮು ಸನ್ಮಾನಿಸಿ ಗೌರವಿಸಲಾಯಿತು. ಘಟಕ ವ್ಯಾಪ್ತಿಯ ಗುರಿಕಾರರಿಗೆ ಗೌರವ ಧನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಪೂರ್ವಭಾವಿಯಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಮತ್ತು ಸಂಘಟನೆಯ ಸದಸ್ಯರಿಗೆ ಹಮ್ಮಿಕೊಂಡ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಭಾಗವಹಿಸಿದ ಪ್ರತಿಯೊಬ್ಬ ವಿಧ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ವಿತರಿಸಲಾಯಿತು.

ಜಿಲ್ಲಾ ಸಂಘಟನೆಯ ಮಾಜಿ ಅಧ್ಯಕ್ಷರುಗಳು ಹಾಗೂ ವಿವಿಧ ಘಟಕಗಳಿಂದ ಆಗಮಿಸಿದ ಗಣ್ಯರನ್ನು ಸಭೆಯಲ್ಲಿ ಗುರುತಿಸಲಾಯಿತು. ಸಭಾ ಕಾರ್ಯಕ್ರಮದ ತರುವಾಯ “ಮೊಗಸಿರಿ- 2026” ಸಾಂಸ್ಕöÈತಿಕ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ಸಭೆಗೆ ಆಗಮಿಸಿದ ಪ್ರತಿಯೊಬ್ಬರಿಗೂ, ವನಮೋತ್ಸವದ ಪ್ರಯುಕ್ತ ಗಿಡಗಳನ್ನು ವಿತರಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೇಶ್ವರ ಘಟಕದ ಅಧ್ಯಕ್ಷ ರಾಘವೇಂದ್ರ ಹರಪ್ಪನಕೆರೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ-ಕುಂದಾಪುರ ಶಾಖಾಧ್ಯಕ್ಷ ಉದಯ್ ಕುಮಾರ್ ಹಟ್ಟಿಯಂಗಡಿ, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ನಿಕಟಪೂರ್ವ ಅಧ್ಯಕ್ಷರಾದ ಜಯಂತ್ ಅಮೀನ್ ಕೋಡಿ, ಕೋಟೇಶ್ವರ ಘಟಕದ ಉಸ್ತುವಾರಿ ಅಶೋಕ್ ತೆಕ್ಕಟ್ಟೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶೇಖರ್ ತೋಳಾರ್, ಕೋಟೇಶ್ವರ ಘಟಕದ ಗೌರವಾಧ್ಯಕ್ಷ ಆನಂದ್ ಕುಂದರ್ ಅಜ್ಜರಬೆಟ್ಟು, ಮಹಿಳಾ ಸಂಘಟನೆಯ ಅಧ್ಯಕ್ಷೆ ಗಾಯತ್ರಿ ವಿಕ್ರಮ್, ಕಾರ್ಯದರ್ಶಿ ರಾಜೇಶ್ವರಿ ಉಪಸ್ಥಿತರಿದ್ದರು. ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷ ನಾಗರಾಜ್ ಬೀಜಾಡಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕೋಶಾಧಿಕಾರಿ ರಾಜೇಶ್ ಕಾಂಚನ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ ಕಾರ್ಯದರ್ಶಿ ನಾಗರಾಜ್ ತೆಕ್ಕಟ್ಟೆ ವಾರ್ಷಿಕ ವರದಿ ಮಂಡಿಸಿದರು.ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಇದರ 21’ನೇ ವಾರ್ಷಿಕ ಮಹಾಸಭೆ ಹಾಗೂ ವನಮೋತ್ಸವ ಕಾರ್ಯಕ್ರಮದಲ್ಲಿ ಸಿಎ ಪರಿಕ್ಷೆಯಲ್ಲಿ ತೇರ್ಗಡೆ ಹೊಂದಿದ ಅನುಷ್ಕ ಎ. ಕುಂದರ್ ಅವರನ್ಮು ಸನ್ಮಾನಿಸಿ ಗೌರವಿಸಲಾಯಿತು.

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ-ಕುಂದಾಪುರ ಶಾಖಾಧ್ಯಕ್ಷ ಉದಯ್ ಕುಮಾರ್ ಹಟ್ಟಿಯಂಗಡಿ, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ನಿಕಟಪೂರ್ವ ಅಧ್ಯಕ್ಷರಾದ ಜಯಂತ್ ಅಮೀನ್ ಕೋಡಿ, ಕೋಟೇಶ್ವರ ಘಟಕದ ಉಸ್ತುವಾರಿ ಅಶೋಕ್ ತೆಕ್ಕಟ್ಟೆ, ಕೋಟೇಶ್ವರ ಘಟಕದ ಅಧ್ಯಕ್ಷ ರಾಘವೇಂದ್ರ ಹರಪ್ಪನಕೆರೆ ಇದ್ದರು.

Leave a Reply

Your email address will not be published. Required fields are marked *