ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಣೂರು ಪಡುಕರೆ ಶಾಲೆಯಲ್ಲಿ ಉತ್ತಮ ಪೋಷಕತ್ವ ಕುರಿತು ವಿಶೇಷ ಕಾರ್ಯಕ್ರಮ

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರು ಪಡುಕರೆಯ ಕಿಂಡರ್ ಗಾರ್ಡನ್ ವಿಭಾಗದಲ್ಲಿ ಪೋಷಕರ ಸಭೆ ಹಾಗೂ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಂತೆ “ಉತ್ತಮ ಪೋಷಕತ್ವ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬ್ರಹ್ಮಾವರದ ಲಿಟಲ್ ರಾಕ್ ಇಂಡಿಯನ್ ಸ್ಕೂಲ್‌ನ ಶಿಕ್ಷಕಿ ವಿವಿತಾ ಪಿಂಟೋ ಅವರು ಮಾತನಾಡಿ, ಇಂದಿನ ಸಮಾಜದಲ್ಲಿ ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಮಕ್ಕಳೊಂದಿಗೆ ಗುಣಮಟ್ಟದ ಸಮಯ ಕಳೆಯುವುದು, ಉತ್ತಮ ಸಂವಹನ ಬೆಳೆಸುವುದು, ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದು, ಮೊಬೈಲ್ ಮತ್ತು ಡಿಜಿಟಲ್ ಸಾಧನಗಳ ಬಳಕೆಯನ್ನು ನಿಯಂತ್ರಿಸುವುದು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಮೂಲಕ ಆತ್ಮವಿಶ್ವಾಸಿ ಮಕ್ಕಳನ್ನು ರೂಪಿಸುವಲ್ಲಿ ಪೋಷಕರ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಾ ವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಿವೇಕಾನಂದ ವಿ. ಗಾಂವ್ಕರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್. ಕುಂದರ್, ಗೀತಾನಂದ ಫೌಂಡೇಶನ್‌ನ ವೈಷ್ಣವಿ ರಕ್ಷಿತ್ ಕುಂದರ್ ಹಾಗೂ ಎಸ್‌ಡಿಎಂಸಿ ಸದಸ್ಯರಾದ ನಾಗರಾಜ್ ಮತ್ತು ವಿನಯ್ ಉಪಸ್ಥಿತರಿದ್ದರು.ಶಾಲೆಯ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮವು ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಪಾತ್ರದ ಮಹತ್ವವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಸಂಯೋಜಕರಾದ ರವಿಕಿರಣ ಕೋಟ ನಿರೂಪಿಸಿದರು.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರು ಪಡುಕರೆಯ ಕಿಂಡರ್ ಗಾರ್ಡನ್ ವಿಭಾಗದಲ್ಲಿ ಪೋಷಕರ ಸಭೆ ಹಾಗೂ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಮಾರ್ಗದರ್ಶನದಂತೆ “ಉತ್ತಮ ಪೋಷಕತ್ವ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿಬ್ರಹ್ಮಾವರದ ಲಿಟಲ್ ರಾಕ್ ಇಂಡಿಯನ್ ಸ್ಕೂಲ್‌ನ ಶಿಕ್ಷಕಿ ವಿವಿತಾ ಪಿಂಟೋ ಅವರು ಮಾತನಾಡಿದರು.

ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಾ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಿವೇಕಾನಂದ ವಿ. ಗಾಂವ್ಕರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್. ಕುಂದರ್, ಗೀತಾನಂದ ಫೌಂಡೇಶನ್‌ನ ವೈಷ್ಣವಿ ರಕ್ಷಿತ್ ಕುಂದರ್ ಇದ್ದರು.

Leave a Reply

Your email address will not be published. Required fields are marked *