ರಾಜ್ಯದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಶೇ.7.5ರಷ್ಟು ವಿಶೇಷ ಒಳಮೀಸಲಾತಿ ನೀಡುವ ‘ವಿದ್ಯಾರ್ಥಿ ಸಹಾಯಹಸ್ತ’ ಯೋಜನೆಯನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ.ಪ್ರಸ್ತುತ ಜಾರಿಯಲ್ಲಿರುವ ಶೇ.15ರ ಗ್ರಾಮೀಣ ಮೀಸಲಾತಿಯಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಒಳಮೀಸಲಾತಿ ನೀಡಲಾಗುತ್ತದೆ.
ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯಲ್ಲಿಯೂ ಇದು ಅನ್ವಯವಾಗಲಿದ್ದು, ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇದರಿಂದ ಮಹತ್ವದ ಪ್ರಯೋಜನ ದೊರೆಯಲಿದೆ.80ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಈ ಯೋಜನೆಯನ್ನು ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.
ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸುತ್ತಿದೆ.ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಇದು ಸ್ವಾತಂತ್ರ್ಯೋತ್ಸವದ ವಿಶೇಷ ಕೊಡುಗೆಯಾಗಿದೆ. ಈ ಮಹತ್ವದ ಕ್ರಮವನ್ನು ಕರ್ನಾಟಕ ರಾಜ್ಯ SDMC ಸಮನ್ವಯ ಕೇಂದ್ರ ವೇದಿಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಆದರೆ ಶಿಕ್ಷಣದ ಅವಕಾಶದ ಜೊತೆಗೆ ಉದ್ಯೋಗದ ಅವಕಾಶವೂ ದೊರೆಯಬೇಕು. ಆದ್ದರಿಂದ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿಯೂ ಸೂಕ್ತ ಪ್ರಮಾಣದ ವಿಶೇಷ ಮೀಸಲಾತಿ ಕಲ್ಪಿಸುವ ಕುರಿತು ಸರ್ಕಾರ ಪರಿಗಣಿಸಬೇಕು ಎಂದು ಕರ್ನಾಟಕ ರಾಜ್ಯ SDMC ಸಮನ್ವಯ ಕೇಂದ್ರ ವೇದಿಕೆ ವಿನಂತಿಸುತ್ತದೆ.
“ಸರಕಾರಿ ಶಾಲೆಯ ಮಕ್ಕಳಿಗೆ ಶಿಕ್ಷಣದಲ್ಲಿ ಅವಕಾಶ — ಉದ್ಯೋಗದಲ್ಲೂ ಅವಕಾಶ; ಗ್ರಾಮೀಣ ಮಕ್ಕಳ ಭವಿಷ್ಯಕ್ಕೆ ಸರ್ಕಾರದ ಬಲವಾದ ಬೆಂಬಲ. ”ಮೊಯ್ದಿನ್ ಕುಟ್ಟಿರಾಜ್ಯಾಧ್ಯಕ್ಷರುಕರ್ನಾಟಕ ರಾಜ್ಯ SDMC ಸಮನ್ವಯ ಕೇಂದ್ರ ವೇದಿಕೆ (ರಿ.)📞 7090004020 | 9743734020ಸರಕಾರಿ ಶಾಲೆಗಳು ಉಳಿಯಲಿ, ಬೆಳೆಯಲಿ — ಗುಣಮಟ್ಟದ ಶಿಕ್ಷಣ ದೊರಕುವಂತಾಗಲಿ.












Leave a Reply