ಕಿರಣ್ ಪೂಜಾರಿ ಸಾರಥ್ಯದಲ್ಲಿ…..

56ನೇ ‘ರೈತ ಪುರಸ್ಕಾರ’ಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ, ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಸ್ನೇಹಕೂಟ ಮಣೂರು ಇವುಗಳ ಸಹಯೋಗದೊಂದಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸಂಯೋಜನೆಯೊoದಿಗೆ ಪ್ರತಿ ತಿಂಗಳು ಸಾಧಕ ಕೃಷಿಕರನ್ನು ಗುರುತಿಸುವ ‘ರೈತರೆಡೆಗೆ ನಮ್ಮ ನಡೆ’ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

56ನೇ ಸರಣಿ ಕಾರ್ಯಕ್ರಮದ ಅಂಗವಾಗಿ, ಸಾಧಕ ಕೃಷಿಕರ ಮನೆಯಂಗಳಕ್ಕೇ ತೆರಳಿ ‘ಕೃಷಿ ಪರಿಕರ’ವನ್ನು ನೀಡಿ ಗೌರವಿಸುವ ಕಾರ್ಯಕ್ರಮವು ಆ.26ರ ಬುಧವಾರ ಸಂಜೆ 4:45ಕ್ಕೆ ನಡೆಯಲಿದೆ. ಈ ಬಾರಿಯ ‘ರೈತ ಪುರಸ್ಕಾರ’ಕ್ಕೆ ಗುಂಡ್ಮಿ ಶೇಖರ್ ಪೂಜಾರಿ ಅವರು ಆಯ್ಕೆಗೊಳಿಸಿದ್ದು, ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂಘದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ , ಅಧ್ಯಕ್ಷ ಮನೋಹರ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *