ಕೋಟ: ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯರ ವತಿಯಿಂದ 13ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಶುಕ್ರವಾರದಂದು ಆಯೋಜನೆಗೊಂಡಿದೆ. ಪೂರ್ವಾಹ್ನ 8.00 ಗಂಟೆಗೆ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಶ್ರೀ ಮಹೇಶ ಶಾಂತಿ ಹೆಜಮಾಡಿ ಇವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜಾ ವಿಧಿವಿಧಾನಗಳು ನಡೆಯಲಿವೆ.
ಸಾಮೂಹಿಕ ಪೂಜೆಯ ಬಳಿಕ ಮಧ್ಯಾಹ್ನ 12.30ಕ್ಕೆ ಶ್ರೀ ವರುಣ ತೀರ್ಥ ರಾಜಶೇಖರ ದೇವಸ್ಥಾನದ ವಾಸುದೇವ ಮಂಟಪದಲ್ಲಿ ಮಹಾ ಅನ್ನಸಂತರ್ಪಣಾ ಕಾರ್ಯಕ್ರಮ ನೆರವೇರಲಿದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ದೇವಿಯ ಪ್ರಸಾದವನ್ನು ಸ್ವೀಕರಿಸಿ ಕೃಪೆಗೆ ಪಾತ್ರರಾಗಬೇಕಾಗಿ ಅಧ್ಯಕ್ಷರಾದ ಸುಧಾ ಎ ಪೂಜಾರಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.












Leave a Reply