ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ

ಕೋಟ: ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿವರ್ಷ ಕೊಡಮಾಡುವ ಅತ್ಯತ್ತಮ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆಗೊಳಿಸಿ ಶನಿವಾರ ಪ್ರಶಸ್ತಿಯನ್ನು ಪ್ರದಾನಿಸಿತು.ಆ.22ರಂದು ಮಂಗಳೂರಿನ ದಕ್ಷಿಣಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಸಮಾರಂಭದಲ್ಲಿ ಸಂಘದ ಅಧ್ಯಕ್ಷೆ ವೆಲೇರಿಯನ್ ಡಿಸೋಜ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ಇವರಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಐಕಳದ ಬಾವ ಡಾ‌.ದೇವಿಪ್ರಸಾದ್ ಶೆಟ್ಟಿ ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಹಸ್ತಾಂತರಿಸಿದರು. ಈ ವೇಳೆ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ ಸುಜಾತ ವೆಂಕಟೇಶ ಇದ್ದರು.

Leave a Reply

Your email address will not be published. Required fields are marked *