ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗಸoಸ್ಥೆ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಸಮಾರಂಭ

ಕೋಟ: ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಸಮಾರಂಭವು ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಎರಡನೇ ಶ್ರಾವಣ ಶನಿವಾರದಂದು ದೇವಸ್ಥಾನದ ಜ್ಞಾನ ಮಂದಿರದಲ್ಲಿ ಜರುಗಿತು. ಅಂಗಸoಸ್ಥೆಯ ಉಪಾಧ್ಯಕ್ಷ ಕೃಷ್ಣಪ್ರಸಾದ ಹೇರಳೆ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ನರಿಕೊಂಬು ಪ್ರಕಾಶ ಕಾರಂತ ತನಗೆ ನೀಡಿದ ಅಭಿನಂದನೆಯನ್ನು ಸ್ವೀಕರಿಸಿ, ಶುಭಶಂಸನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ವರಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಉಪಾಧ್ಯಕ್ಷ ಗುಂಡ್ಮಿ ಮಧುರ ಉಪಾಧ್ಯ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಪ್ರಶಂಸಿಸಿದರು.

ಈ ವೇಳೆ ನೂತನವಾಗಿ ಆಯ್ಕೆಯಾಗಿದ್ದ ದೇವಳದ ನಾಲ್ವರು ಧರ್ಮದರ್ಶಿಗಳನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಬಾರಿ ಸಮಾಜದ 13 ಜನ ಹಿರಿಯರನ್ನು ಗುರುತಿಸಿ ಗೌರವಿಸಲಾಯಿತು, ವಿಶೇಷ ಸಾಧನೆಗೈದ ನಾಲ್ವರು ವಿದ್ಯಾರ್ಥಿಗಳನ್ನು ವಿಶೇಷವಾಗಿ ಪುರಸ್ಕರಿಸಲಾಯಿತು. ವಿಶೇಷ ದತ್ತಿನಿಧಿ ಪುರಸ್ಕಾರ, ಪ್ರತಿಭಾ ಪುರಸ್ಕಾರ, ಅಶಕ್ತರ ಸಹಾಯ ನಿಧಿ, ವಿದ್ಯಾರ್ಥಿ ದತ್ತಿನಿಧಿ ವೇತನಗಳನ್ನು ವಿತರಿಸಲಾಯಿತು.

ಕೇಂದ್ರಸoಸ್ಥೆಯ ಉಪಾಧ್ಯಕ್ಷ ಬಿ. ಚಂದ್ರಶೇಖರ ಐತಾಳ, ವಲಯ ಸಂಘಟನಾ ಕಾರ್ಯದರ್ಶಿ ಶ್ರೀಪತಿ ಅಧಿಕಾರಿ, ಯುವ ವೇದಿಕೆಯ ಅಧ್ಯಕ್ಷ ಸಚಿನ್ ಹೇರ್ಳೆ , ಮಹಿಳಾ ವೇದಿಕೆ ಉಪಾಧ್ಯಕ್ಷೆ ವಿಜಯಲಕ್ಷ್ಮೀ ತುಂಗ ಉಪಸ್ಥಿತರಿದ್ದರು. ಕಾರ್ಯದರ್ಶಿ ಮಹಾಬಲ ಹೇರ್ಳೆ ವಾರ್ಷಿಕ ವರದಿಯನ್ನು ವಾಚಿಸಿದರು. ಕೋಶಾಧಿಕಾರಿ ನಾಗರಾಜ ಉಪಾಧ್ಯ ಆಯವ್ಯಯ ಪತ್ರವನ್ನು ಮಂಡಿಸಿದರು. ಕೃಷ್ಣಪ್ರಸಾದ ಹೇರ್ಳೆ ಸ್ವಾಗತಿಸಿ, ಗಿರೀಶ ಮಯ್ಯ ವಂದಿಸಿದರು.

ಕಾರ್ಯಕ್ರಮವನ್ನು ಕಾರ್ತಟ್ಟು ನಾಗರಾಜ ಐತಾಳ ನಿರೂಪಿಸಿದರು.ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗಸoಸ್ಥೆ ವಾರ್ಷಿಕ ಮಹಾಸಭೆಯಲ್ಲಿ ನೂತನವಾಗಿ ಆಯ್ಕೆಯಾಗಿದ್ದ ದೇವಳದ ನಾಲ್ವರು ಧರ್ಮದರ್ಶಿಗಳನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕೇಂದ್ರ ಸಂಸ್ಥೆಯ ಉಪಾಧ್ಯಕ್ಷ ಬಿ. ಚಂದ್ರಶೇಖರ ಐತಾಳ, ವಲಯ ಸಂಘಟನಾ ಕಾರ್ಯದರ್ಶಿ ಶ್ರೀಪತಿ ಅಧಿಕಾರಿ, ಯುವ ವೇದಿಕೆಯ ಅಧ್ಯಕ್ಷ ಸಚಿನ್ ಹೇರ್ಳೆ , ಮಹಿಳಾ ವೇದಿಕೆ ಉಪಾಧ್ಯಕ್ಷೆ ವಿಜಯಲಕ್ಷ್ಮೀ ತುಂಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *