ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ ಹಾಗೂ ಸ್ಥಳೀಯ ಸಂಘಸoಸ್ಥೆಗಳ ಸಹಯೋಗದೊಂದಿಗೆ 315ನೇ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನದ ಭಾಗವಾಗಿ ಸಾಲಿಗ್ರಾಮ ಪಟ್ಟಣಪಂಚಾಯತ್ ಹಾಗೂ ಕೋಡಿ ಗ್ರಾಮಪಂಚಾಯತ್ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಭಾನುವಾರ ಜರಗುತು.
ಉಡುಪಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಕೃಷ್ಣ ಪೂಜಾರಿ ಪಿ ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ಸಂಚಾಲಕ ಅಮೃತ್ ಜೋಗಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ , ಮಾಜಿ ಅಧ್ಯಕ್ಷ ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಸದಸ್ಯ ಭಾಸ್ಕರ್ ದೇವಾಡಿಗ, ನವನೀತ ಜೋಗಿ,ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು ಉಪಸ್ಥಿತರಿದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.















Leave a Reply