ಕೋಟ: ರಾಜ್ಯ ಸರ್ಕಾರದಿಂದ ಸರಿಸುಮಾರು 15,000 ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕ, ದೈಹಿಕ ಶಿಕ್ಷಕ ಮತ್ತು ಕಂಪ್ಯೂಟರ್ ಶಿಕ್ಷಕರ ಹುದ್ದೆಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಇದ್ದು, ಪರೀಕ್ಷೆಗೆ ಸಂಬoಧಿಸಿದoತೆ ಸೆ. 6 ರಂದು ಭಾನುವಾರ ಬೆಳಿಗ್ಗೆ 09.00 ರಿಂದ ಸಂಜೆ 05.00 ಗಂಟೆವರೆಗೆ ಕೋಟ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಉಚಿತ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಶ್ರೀ ಕೃಷ್ಣ ಪ್ರಸಾದ್ ಪೌಂಡೇಶನ್‌ನ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ ವಹಿಸಿಕೊಂಡಿದ್ದು, ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಈ ಕಾರ್ಯಕ್ರಮದ ಸಹಭಾಗಿತ್ವವವನ್ನು ನೀಡಿದೆ. ಕಾರ್ಯಕ್ರಮದಲ್ಲಿ ರಾಜ್ಯದ ನುರಿತ ತಜ್ಞರು ಕಾರ್ಯಗಾರವನ್ನು ನಡೆಸಿಕೊಡಲಿದ್ದು, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಗಾರವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕಿಸಬೇಕಾದ ಸಂಖ್ಯೆ:9980040551 ಹರೀಶ್ ಕುಮಾರ್ ಶೆಟ್ಟಿ.











Leave a Reply