ಹೆಸ್ಕುತ್ತೂರು: ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ರೋಟೇರಿಯನ್ ಟಿ. ರಾಜೀವ್ ಶೆಟ್ಟಿ ಅವರು ಸಂಚಾರ ನಿಯಮ ಪಾಲನೆಯ ಮಹತ್ವವನ್ನು ವಿವರಿಸಿದರು.
ಮುಖ್ಯ ಅತಿಥಿ ನಿವೃತ್ತ ಎಆರ್‌ಟಿಒ ಶ್ರೀ ವಿಶ್ವನಾಥ ನಾಯಕ್ ಅವರು ವೀಡಿಯೊ ಪ್ರದರ್ಶನದ ಮೂಲಕ ರಸ್ತೆ ಸುರಕ್ಷತಾ ನಿಯಮಗಳು ಮತ್ತು ಜವಾಬ್ದಾರಿಯುತ ಚಾಲನೆಯ ಕುರಿತು ಮಾಹಿತಿ ನೀಡಿದರು.ಮುಖ್ಯೋಪಾಧ್ಯಾಯ ಶ್ರೀ ಅಬ್ದುಲ್ ರವೂಫ್ ಸ್ವಾಗತಿಸಿದರು. ಶಿಕ್ಷಕ ಶ್ರೀ ರಾಘವೇಂದ್ರ ದೇವಾಡಿಗ ನಿರೂಪಿಸಿದರು. ಸುಮಾರು 125 ವಿದ್ಯಾರ್ಥಿಗಳು ಭಾಗವಹಿಸಿದರು.
ರೋಟೇರಿಯನ್ ಜಗದೀಶ್ ಎಚ್., ವಿಠ್ಠಲ್ ರಾವ್, ಟಿ. ಸುಧಾಕರ್ ಶೆಟ್ಟಿ, ಸಹಾಯಕ ಗವರ್ನರ್ ಚಂದ್ರಶೇಖರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ನಿತ್ಯಾನಂದ ಕೋಟಾರಿ ಹಾಗೂ ಕಲಿಕಾ ಸಹಾಯಕ ಸುರೇಶ್ ಬೇಳೂರು ಉಪಸ್ಥಿತರಿದ್ದರು. ಶಿಕ್ಷಕ ಶ್ರೀ ಗೋಪಾಲ್ ಸೋಮಯಾಜಿ ವಂದಿಸಿದರು.ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.












Leave a Reply