ಕೋಟ: ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ ಸಮಿತಿ, ಆಯೋಜನೆಯ ದಕ್ಷಿಣ ಭಾರತದ ಸೌತ್ ಜೋನ್ ಲೆವೆಲ್ ಕ್ರೀಡಾಕೂಟವು ತೆಲಂಗಾಣ ರಾಜ್ಯದ ಹೈದರಾಬಾದ್‌ನಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ ಸೇವಾ ಸಂಗಮ ವಿದ್ಯಾ ಕೇಂದ್ರ ವಿದ್ಯಾಗಿರಿ ತೆಕ್ಕಟ್ಟೆಯ 7ನೇ ತರಗತಿ ವಿದ್ಯಾರ್ಥಿನಿ ಯಶಿ ಭಾಗವಹಿಸಿ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ವಿಜೇತರಾಗಿ, ಅಕ್ಟೋಬರ್ 31, 2026ರಂದು ಗಾಜಿಯಾಬಾದ್ ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರನ್ನು ಶಾಲಾ ಆಡಳಿತ ಮಂಡಳಿ,ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.












Leave a Reply