ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬ್ರಹ್ಮಾವರ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ

ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕ ಸಾರಥ್ಯದಲ್ಲಿ ಗೀತಾಾನಂದ ಪೌಂಡೇಶನ್ ಮಣೂರುಪಡುಕರೆ ಕಾರ್ಯನಿರತ ಪತ್ರಕರ್ತರ ಸಂಘ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಅಕ್ಟೋಬರ್ 4ರಂದು ಸಾಸ್ತಾನದ ಶಿವ ಕೃಪದಲ್ಲಿ ನಡೆಯಲಿರುವ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕೋಟದ ವಿವೇಕ ಬಾಲಕರ ಪ್ರೌಢಶಾಲೆಯ ಶಿಕ್ಷಕರಾಗಿರುವ ಶ್ರೀ ನರೇಂದ್ರ ಕುಮಾರ್ ಕೋಟ ಆಯ್ಕೆ ಆಗಿರುತ್ತಾರೆ.

ಎಳೆಯ ಮಕ್ಕಳಲ್ಲಿ ಕನ್ನಡದ ಪ್ರೀತಿ ಮತ್ತು ಸಾಹಿತ್ಯ ರಚನೆಯ ಅಭಿರುಚಿಯನ್ನು ಮೂಡಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ ಸಾಹಿತ್ಯದ ವಿವಿಧ ಪ್ರಕಾರಗಳಾದ ನಾಟಕ,ಕಥೆ, ಕಾದಂಬರಿ, ಕವನ, ಜನಪದ ಸಾಹಿತ್ಯಗಳಲ್ಲಿ ಇಪ್ಪತ್ತಕ್ಕೂ ಮಿಕ್ಕಿದ ಪ್ರತಿಯೊಂದು ರಚಿಸಿ, ಉಸಿರು ಸಂಸ್ಥೆಯನ್ನು ಹುಟ್ಟು ಹಾಕಿ ಇಪ್ಪತ್ತ ಆರು ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಶಿಬಿರಗಳನ್ನು ಆಯೋಜಿಸಿ, ಜೊತೆಗೆ ನೆನಪು ಮೂವೀಸ್ ಕೋಟದ ಮೂಲಕ ರಾಜ್ಯ ಪ್ರಶಸ್ತಿ ಪಡೆದ ಸುಗಂಧಿ ಮಕ್ಕಳ ಚಲನಚಿತ್ರ ನಿರ್ಮಿಸಿದ್ದಾರೆ.

ಅತ್ಯುತ್ತಮ ಸಂಘಟಕರಾಗಿರುವ ಇವರು ಜಿಲ್ಲಾ ಮತ್ತು ರಾಜ್ಯಮಟ್ಟದ ಅನೇಕ ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿ, ಕುಂದಾಪುರ ಕನ್ನಡದ ಆರು ಸಮ್ಮೇಳನಗಳನ್ನ ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದು.ಬಹುಮುಖ ಪ್ರತಿಭಾವಂತರಾದ ಇವರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪುರಸ್ಕಾರ ಜೊತೆಗೆ ಐವತ್ತಕ್ಕೂ ಮಿಕ್ಕಿದ ವಿವಿಧ ಪುರಸ್ಕಾರಗಳನ್ನು ಪಡೆದಿರುತ್ತಾರೆ ಅಕ್ಟೋಬರ್ 4ರಂದು ಇವರ ಸರ್ವಾದ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು ಸರ್ವರೂ ಭಾಗವಹಿಸುವಂತೆ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಆನಂದ ಸಿ ಕುಂದರ್ ಕಾರ್ಯಧ್ಯಕ್ಷರಾದ ಡಾಕ್ಟರ್ ವಿಜಯ ಮಂಜರ್ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ರಾಮಚಂದ್ರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *