ತೆಕ್ಕಟ್ಟೆ: ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ತಾಲೂಕು ಉಳ್ತರೂ ಗ್ರಾಮದ ಇಲ್ಲಿನ ನಿವೃತ್ತ ಶಿಕ್ಷಕ ಶ್ರೀ ಚಂದ್ರಶೇಖರ ಶೆಟ್ಟಿ ಅವರನ್ನು ಸೆ. 11ರಂದು ತೆಕ್ಕಟ್ಟೆಯ ರೋಟರಿ ಕಚೇರಿಯಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ತೆಕ್ಕಟ್ಟೆ ಅಧ್ಯಕ್ಷ Rtn. ಟಿ. ರಾಜೀವ್ ಶೆಟ್ಟಿ ಮಾತನಾಡಿ, ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ದೇಶಕ್ಕೆ ಸಮರ್ಥ ಹಾಗೂ ಜವಾಬ್ದಾರಿಯುತ ನಾಗರಿಕರನ್ನು ನೀಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ಚಂದ್ರಶೇಖರ ಶೆಟ್ಟಿ, ಶಿಕ್ಷಕ ವೃತ್ತಿಯಲ್ಲಿ ಸಮರ್ಪಣೆ, ತ್ಯಾಗ ಮತ್ತು ಬದ್ಧತೆ ಅತ್ಯಗತ್ಯ. ಇವುಗಳೊಂದಿಗೆ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಮಾಜಕ್ಕೆ ಹಾಗೂ ರಾಷ್ಟ್ರಕ್ಕೆ ಉತ್ತಮ ನಾಗರಿಕರನ್ನು ರೂಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.












Leave a Reply