ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರಕ್ಕೆ ಆಯ್ಕೆ

ಕೋಟ : ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ-ಯಡ್ತಾಡಿ ಕೊಡ ಮಾಡುವ 2026 ನೇ ಸಾಲಿನ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರವನ್ನು ಪದ್ಮಶ್ರೀ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಆಯ್ಕೆ ಮಾಡಲಾಗಿದೆ.ಕಿತ್ತಳೆ ಹಣ್ಣನ್ನು ಮಾರಿ ತನ್ನ ಊರಿನಲ್ಲಿ ಯಾರು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ತನ್ನ ಊರಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿ ಸಮಾಜಕ್ಕೆ ಮಾದರಿಯಾಗಿ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಅಕ್ಟೋಬರ್ 18 ರಂದು ನಡೆಯುವ ನಮ್ಮೂರ ದಸರಾ-2026( ಭಕ್ತಿ ಬಣ್ಣದ ಮಾರ್ದನಿ) ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಯುವಕ ಮಂಡಲದ ಅಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯದರ್ಶಿ ಸುಧಾಕರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *