ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉದ್ಯೋಗ ಕ್ಷೇತ್ರದಲ್ಲಿ ಕೌಶಲ್ಯ ನಿರ್ವಹಣೆ ಅಗತ್ಯ: ಶ್ರೀ ವಿನಯ ಕೃಷ್ಣ ಎನ್

ಉದ್ಯೋಗ ಕ್ಷೇತ್ರದಲ್ಲಿ ಕೌಶಲ್ಯ ನಿರ್ವಹಣೆ ಅಗತ್ಯ – ಶ್ರೀ ವಿನಯ ಕೃಷ್ಣ ಎನ್ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ಶೈಕ್ಷಣಿಕ ಅರ್ಹತೆಯ ಜೊತೆಗೆ ಸಂವಹನ ಕೌಶಲ್ಯ, ನಾಯಕತ್ವ ಗುಣ, ಸಮಯ ನಿರ್ವಹಣೆ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ. ಕಾಲೇಜು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಹಾಗೂ ಕೌಶಲ್ಯಗಳನ್ನು ಗುರುತಿಸಿಕೊಂಡು ಸೂಕ್ತವಾದ ವೃತ್ತಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಮಂಗಳೂರಿನ ಸೇಂಟ್ ಅಲೋಶಿಯಸ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಇನ್‌ಫರ್ಮೇಶನ್ ಟೆಕ್ನಾಲಜಿ (AIMIT)ಯ ಸಹಾಯಕ ಪ್ರಾಧ್ಯಾಪಕ ಶ್ರೀ ವಿನಯ ಕೃಷ್ಣ ಎನ್. ಹೇಳಿದರು.

ಶಂಕರನಾರಾಯಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ನಿರ್ವಹಣಾ ವಿಭಾಗ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಉದ್ಘಾಟಿಸಿ “ವೃತ್ತಿ ಯೋಜನೆ” ಕುರಿತ ಕಾರ್ಯಾಗಾರದಲ್ಲಿ ಅವರು ಮತನಾಡುತ್ತಿದ್ದರು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ವೃತ್ತಿ ಯೋಜನೆ, ವೃತ್ತಿ ಆಯ್ಕೆ, ಉದ್ಯೋಗಾವಕಾಶಗಳ ಅರಿವು ಹಾಗೂ ಅಗತ್ಯ ಕೌಶಲ್ಯಗಳ ಅಭಿವೃದ್ಧಿ ಕುರಿತು ಜಾಗೃತಿ ಮೂಡಿಸುವುದಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ವೃತ್ತಿ ಜೀವನಕ್ಕೆ ಸರಿಯಾದ ದಿಕ್ಕು ಮತ್ತು ಮಾರ್ಗದರ್ಶನ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಡಾ. ದಿವ್ಯಾ ಎಂ. ಎಸ್. ಹಾಗೂ ಐ.ಕ್ಯೂ.ಎ.ಸಿ ಸಂಯೋಜಕಿ ಡಾ. ನಳಿನಶ್ರೀ ಆರ್. ಎನ್. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *