ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬೈಂದೂರು: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ವಿರುದ್ಧ ದಾಳಿ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ.

ಕಾಲ್ತೋಡು ಬೀಟ್ ಅಧಿಕಾರಿಯಿಂದ ದೊರೆತ ಮಾಹಿತಿಯ ಮೇರೆಗೆ, 23.09.2026ರಂದು ಬೈಂದೂರು ಠಾಣೆಯ ಪಿಎಸ್‌ಐ ಸುನಿಲ್ ಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿಕೊಂಡು, ಮಧ್ಯಾಹ್ನ 1.15 ಗಂಟೆಗೆ ದಾಳಿ ನಡೆಸಿದರು.

ದಾಳಿಯ ವೇಳೆ ಗಣಿಗಾರಿಕೆ ಸ್ಥಳದಲ್ಲಿದ್ದ ಕೆಂಪುಕಲ್ಲು ತುಂಬಿದ ಎರಡು ಟಿಪ್ಪರ್‌ಗಳು, ಬ್ಲೇಡ್ ಅಳವಡಿಸಿರುವ ಎರಡು ಪವರ್ ಟಿಲ್ಲರ್ ಯಂತ್ರಗಳು ಹಾಗೂ ಎರಡು ಕಲ್ಲು ಎತ್ತುವ ಟ್ರಾಲಿ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹16 ಲಕ್ಷ ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರವೀಂದ್ರ ಪೂಜಾರಿ ಮತ್ತು ಸತೀಶ್ ಶೆಟ್ಟಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *